--ಇಲ್ಲಿ ಜಾಹೀರಾತು--

ಬಿಸಿಲಿನ ತಾಪಕ್ಕೆ ಬ್ಯಾಟರಿಗಳ ಸ್ಫೋಟ: ಹೊತ್ತಿ ಉರಿದ ವಾಹನ 

On: September 9, 2026 8:32 AM
Follow Us
--ಇಲ್ಲಿ ಜಾಹೀರಾತು--

Whatsapp Channel

Join Now

Telegram Group

Join Now

ತಿಪಟೂರು: ತೀವ್ರ ಬಿಸಿಲಿನ ತಾಪಕ್ಕೆ ಬ್ಯಾಟರಿ ಸ್ಫೋಟಗೊಂಡ ಪರಿಣಾಮ, ಬ್ಯಾಟರಿಗಳನ್ನು ಸಾಗಿಸುತ್ತಿದ್ದ ಮಹೇಂದ್ರ ಕಂಪನಿಯ ಸರಕು ಸಾಗಣೆ ವಾಹನ ಹಾಗೂ ದ್ವಿಚಕ್ರವಾಹನವೊಂದು ಹೊತ್ತಿ ಉರಿದ ಘಟನೆ ತಾಲ್ಲೂಕಿನ ಹುಳಿಯಾರು ರಸ್ತೆಯ ಗೆದ್ದಲಹಳ್ಳಿ ಗೊಲ್ಲರಹಟ್ಟಿ ಗೇಟ್ ಬಳಿ ನಡೆದಿದೆ.

ಬ್ಯಾಟರಿಗಳನ್ನು ಸಾಗಿಸುತ್ತಿದ್ದ ಸರಕು ಸಾಗಣೆ ವಾಹನದಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು, ಕೆಲವೇ ಕ್ಷಣಗಳಲ್ಲಿ ಬ್ಯಾಟರಿಗಳು ಸ್ಫೋಟಗೊಂಡಿವೆ. ಪರಿಣಾಮ ವಾಹನಕ್ಕೆ ಬೆಂಕಿ ವ್ಯಾಪಿಸಿ, ಸಮೀಪದಲ್ಲಿದ್ದ ದ್ವಿಚಕ್ರವಾಹನವೂ ಬೆಂಕಿಗಾಹುತಿಯಾಗಿದೆ.

ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ತಿಳಿದುಬಂದಿದೆ.

ವಿಷಯ ತಿಳಿದ ಕೂಡಲೇ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಘಟನೆಗೆ ನಿಖರ ಕಾರಣ ಹಾಗೂ ಹಾನಿಯ ಪ್ರಮಾಣದ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Author

Editor TumkurVarthe

ತುಮಕೂರು ವಾರ್ತೆ ಕನ್ನಡ ದಿನಪತ್ರಿಕೆ ಪ್ರಧಾನ ಸಂಪಾದಕರು

WhatsApp

Join Now

Telegram

Join Now

Instagram

Join Now