ಕೊಡಲಿಯಿಂದ ಕೊಚ್ಚಿ ಪತ್ನಿ ಕೊಲೆ

ಮೈಸೂರು: ತನ್ನ ಪತ್ನಿಯನ್ನು ಕೊಡಲಿಯಿಂದ ಕೊಚ್ಚಿ ಕೊಲೆ ಮಾಡಿರುವ ಪತಿ ಬಳಿಕ ಪೊಲೀಸರಿಗೆ ಶರಣಾದ ಭೀಕರ ಘಟನೆ ನಗರದ ಹಳೆ ಕೆಸರೆಯಲ್ಲಿ ನಡೆದಿದೆ. ಆರೋಪಿ ಮಹೇಶ್ ತನ್ನ ಪತ್ನಿ ಪುಷ್ಪ (24) ಪ್ರತಿ ದಿನ ಕೆಲಸ ಮುಗಿಸಿ ಮನೆಗೆ ತಡವಾಗಿ ಬರುತ್ತಿದ್ದಾಳೆ ಎಂಬ ಕಾರಣಕ್ಕೆ ಆಕೆಯನ್ನು ಕೊಡಲಿಯಿಂದ ಹೊಡೆದು, ಬಳಿಕ ದಿಂಬಿನಿಂದ ಉಸಿರುಗಟ್ಟಿಸಿ ಕ್ರೂರವಾಗಿ ಹತ್ಯೆ ಮಾಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಮೈಸೂರಿನ ದೇವರಾಜ ಅರಸು ರಸ್ತೆಯ ಖಾಸಗಿ ಬಟ್ಟೆ ಅಂಗಡಿಯೊಂದರಲ್ಲಿ ಪುಷ್ಪ ಕೆಲಸ ಮಾಡುತ್ತಿದ್ದರು. ಪ್ರತಿದಿನ … Read more

ಪ್ರೀವೆಡ್ಡಿಂಗ್ ಫೋಟೋ ಶೂಟ್: ಕಾರು ಅಪಘಾತದಲ್ಲಿ ವರ ಸಾವು

ಹಾಸನ: ಪ್ರೀವೆಡ್ಡಿಂಗ್ ಫೋಟೋ ಶೂಟ್ ಗಾಗಿ ವಧುವನ್ನು ಕರೆತರಲು ಹೋಗುತ್ತಿದ್ದ ವೇಳೆ ಭೀಕರ ಅಪಘಾತ ಸಂಭವಿಸಿ ಸ್ಥಳದಲ್ಲೇ ವರ ಸಾವನ್ನಪ್ಪಿರುವ ದಾರುಣ ಘಟನೆ ಹಾಸನದಲ್ಲಿ ನಡೆದಿದೆ. ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಮೂಗಲಿ ಗ್ರಾಮದಲ್ಲಿ ಘಟನೆ ನಡೆದಿದೆ. ಬೇಲೂರು ತಾಲ್ಲೂಕಿನ ಲಕ್ಕುಂದ ಗ್ರಾಮದ ದರ್ಬಾರ್ ಪೇಟೆ ನಿವಾಸಿ ಮನು ಎಲ್.ಎನ್. (29) ಮೃತಪಟ್ಟ ವರ. ಆಲೂರು ತಾಲೂಕು ತೊಗರನಹಳ್ಳಿ ಗ್ರಾಮದ ಕಾಂಚನ ಜೊತೆ ಮನು ಅವರ ಮದುವೆ ಮೇ 10ರಂದು ಆಲೂರು ಬೈರಾಪುರ ರಸ್ತೆಯಲ್ಲಿರುವ ಶ್ರೀ ವೀರಶೈವ … Read more

ಗೋಡೆ ಕುಸಿತ: ಇಇ ಅಮಾನತಿಗೆ ಸಿಎಂ ಆದೇಶ

ಬೆಂಗಳೂರು: ಬೌರಿಂಗ್ ಆಸ್ಪತ್ರೆ ಬಳಿ ಗೋಡೆ ಕುಸಿದು 7 ಮಂದಿ ಬಲಿಯಾದ ಪ್ರಕರಣದಲ್ಲಿ ಸಂಬಂಧಪಟ್ಟ ಎಂಜಿನಿಯರ್ ಅನ್ನು ಕೂಡಲೇ ಅಮಾನತು ಮಾಡಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆದೇಶ ನೀಡಿದ್ದಾರೆ. ಬೌರಿಂಗ್ ಆಸ್ಪತ್ರೆ ಬಳಿ ಗೋಡೆ ಕುಸಿದು 7 ಜನರು ಸಾವು ಹಾಗೂ ಮಳೆ ಅವಾಂತರ ಸಂಬಂಧ ವಿಧಾನಸೌಧದ ತಮ್ಮ ಕಚೇರಿಯಲ್ಲಿ ಸಿಎಂ ಸಭೆ ನಡೆಸಿದರು. ಈ ವೇಳೆ ಸಿಎಂ ಕೆಲವು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಗೋಡೆಗೆ ಹಾನಿ ಆಗಲಿದೆ ಅಂತ ಗೊತ್ತಿದ್ದರೂ ಕೂಡ ಕಾಮಗಾರಿ ಮಣ್ಣನ್ನು ಅಲ್ಲಿ … Read more

‘ಜನಿವಾರ್’ ಸಂತ್ರಸ್ತರಿಗೆ ಸಿಇಟಿ ಮರು ಪರೀಕ್ಷೆ

ಬೆಂಗಳೂರು: ಸಿಟಿಇ ಪರೀಕ್ಷೆ ವೇಳೆ ಜನಿವಾರ ವಿವಾದದಿಂದ ಸಮಸ್ಯೆಗೆ ಒಳಗಾದ ಪರೀಕ್ಷಾರ್ಥಿಗಳಿಗೆ ಮರು ಪರೀಕ್ಷೆ ನಡೆಸುವುದಾಗಿ ಉನ್ನತ ಶಿಕ್ಷಣ ಸಚಿವ ಎಂ.ಸಿ.ಸುಧಾಕರ್ ತಿಳಿಸಿದರು. ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಾಲ್ವರು ಪರೀಕ್ಷಾರ್ಥಿಗಳಿಗೆ ಪರೀಕ್ಷಾ ಕೇಂದ್ರದಲ್ಲಿ ಸಮಸ್ಯೆ ಆಗಿದೆ. ಆ ವಿದ್ಯಾರ್ಥಿಗಳಿಗೆ ಮಾತ್ರ ಮರುಪರೀಕ್ಷೆ ನಡೆಸಲು ನಿರ್ಧಾರ ಮಾಡಲಾಗಿದೆ ಎಂದರು. ಜನಿವಾರ ಹಾಗೂ ಹಿಜಬ್‌ಗೆ ಸಂಬಂಧಿಸಿದಂತೆ ಬೆಂಗಳೂರು ಮತ್ತು ಚಿಕ್ಕಬಳ್ಳಾಪುರ ಎರಡು ಪರೀಕ್ಷಾ ಕೇಂದ್ರದಲ್ಲಿ ಗೊಂದಲ ಆಗಿತ್ತು. ಪರೀಕ್ಷಾರ್ಥಿಗಳು ಮರು ಪರೀಕ್ಷೆಗೆ ಮನವಿ ಮಾಡಿದ್ದರು. ಹೀಗಾಗಿ ತೊಂದರೆಗೆ ಒಳಗಾದ … Read more

ಇಂಧನ ಬೆಲೆ ಏರಿಕೆ: ಕೇಂದ್ರ ಸರ್ಕಾರ ಉಲ್ಟಾ

ನವದೆಹಲಿ: ಹೆಚ್ಚುತ್ತಿರುವ ಇಂಧನ ದರವನ್ನು ಜನರ ಮೇಲೇ ವರ್ಗಾವಣೆ ಮಾಡುವುದು ಅನಿವಾರ್ಯ ಎಂದು ಕೇಂದ್ರ ಹಣಕಾಸು ಸಚಿವಾಲಯ ಸ್ಪಷ್ಟಪಡಿಸಿದೆ. ನವದೆಹಲಿಯಲ್ಲಿ ನಡೆದ ಮಾಸಿಕ ಆರ್ಥಿಕ ಪರಿಶೀಲನೆಯಲ್ಲಿ, ಹೆಚ್ಚಿದ ಇಂಧನದ ಬೆಲೆಗಳನ್ನು ಜನರು ಮತ್ತು ಉದ್ಯಮಗಳಿಗೆ ವರ್ಗಾಯಿಸುವುದು ತಪ್ಪಿಸಲಾಗದ ಕ್ರಮ. ಪೂರೈಕೆ ವ್ಯತ್ಯಯದ ಸಂದರ್ಭಗಳಲ್ಲಿ ಬೇಡಿಕೆ ನಿಯಂತ್ರಣ ಅಗತ್ಯವಾಗಿದೆ. ಇಲ್ಲದಿದ್ದರೆ ಇಂಧನಕ್ಕಾಗಿ ಇನ್ನಷ್ಟು ಹೆಚ್ಚಿನ ಬೆಲೆ ತೆರಬೇಕಾಗುತ್ತದೆ ಎಂದು ಸಚಿವಾಲಯ ತಿಳಿಸಿದೆ. ಆದರೆ, ಚುನಾವಣೆಗೂ ಮುನ್ನ ಮೂರು ದಿನಗಳ ಹಿಂದೆ ಹೇಳಿಕೆ ನೀಡಿದ್ದ ಕೇಂದ್ರ ಸರ್ಕಾರ ಚುನಾವಣೆ ಮುಗಿದ … Read more

ಮೇನಲ್ಲಿ ‘ಸೂರ್ಯ ಶಿಕಾರಿ’ ಇನ್ನೂ 3-4 ಡಿಗ್ರಿ ಸೆಲ್ಸಿಯಸ್ ಬಿಸಿಲು ಹೆಚ್ಚಳ ಸಾಧ್ಯತೆ

ಬೆಂಗಳೂರು: ಏಪ್ರಿಲ್‌ನ ಬಿಸಿಲಿಗೆ ಕರುನಾಡು ಕಾದ ಕಾವಲಿಯಂತಾಗಿದೆ. ಆದರೆ ಬಿಸಿಲಿನ ಪ್ರತಾಪ ಅಸಲಿಗೆ ಇನ್ನೂ ಶುರುವಾಗಿಲ್ಲ. ಮೇ ತಿಂಗಳಲ್ಲಿ ಮತ್ತಷ್ಟು ಹೆಚ್ಚಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಏಪ್ರಿಲ್ ತಿಂಗಳಲ್ಲೇ ನೆತ್ತಿ ಸುಡುವ ಸೂರ್ಯನ ಪ್ರತಾಪಕ್ಕೆ ಕರುನಾಡು ಹೈರಾಣಾಗಿದೆ. ಇದರ ಮಧ್ಯೆ ಮೇನಲ್ಲಿ ಸೂರ್ಯ ಇನ್ನೂ ಉಗ್ರ ಪ್ರತಾಪಿಯಾಗಲಿದ್ದಾನೆ. ಮೇನಲ್ಲಿ ಅಸಲಿ ಬಿಸಿಲಾಘಾತ ಶುರುವಾಗುತ್ತದೆ ಎಂದು ಇಲಾಖೆ ತಿಳಿಸಿದೆ. ಇನ್ನು ದೇಶದಲ್ಲಿ ಹಿಂದೆಂದಿಗಿಂತಲೂ ಬಿಸಿಲ ತಾಪಮಾನ ಜಾಸ್ತಿ ಇದ್ದು, ಮೇ ಅಂತ್ಯದವರೆಗೂ ಮುಂದುವರಿಯುವ ಸಾಧ್ಯತೆ ಇದೆ. … Read more

15 ಲಕ್ಷ ಲಂಚ ಪಡೆಯುವಾಗ ಲೋಕಾ ಬಲೆಗೆ ಬಿದ್ದ ಅಧಿಕಾರಿ

ಬೆಂಗಳೂರು: ಬಾಕಿ ಇರುವ ಕಂದಾಯ ಪ್ರಕರಣವನ್ನು ಪರಿಹರಿಸಲು 15 ಲಕ್ಷ ರೂ. ಲಂಚ ಸ್ವೀಕರಿಸುತ್ತಿದ್ದಾಗ ಬುಧವಾರ ಕೆಐಎಡಿಬಿ ಸಹಾಯಕ ಆಯುಕ್ತ ರೆಡ್ ಹ್ಯಾಂಡ್ ಆಗಿ ಲೋಕಾಯಕ್ತ ಪೊಲೀಸ್ ಬಲೆಗೆ ಸಿಕ್ಕಿಬಿದ್ದಿದ್ದಾರೆ. ಬೆಂಗಳೂರಿನ ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ಧಿ ಮಂಡಳಿಯಲ್ಲಿ (ಕೆಐಎಡಿಬಿ) ವಿಶೇಷ ಸಹಾಯಕ ಆಯುಕ್ತ (ಉತ್ತರ) ಮತ್ತು ವಿಶೇಷ ಭೂಸ್ವಾಧೀನ ಅಧಿಕಾರಿ ಆದ ನಾಗಪ್ರಸಾದ್ ಮತ್ತು ಅವರ ಹೊರಗುತ್ತಿಗೆ ಚಾಲಕ ಕುಮಾರ್ ಅವರನ್ನು ಬಲೆಗೆ ಬೀಳಿಸಿದ ನಂತರ ಬಂಧಿಸಲಾಯಿತು. ಲೋಕಾಯುಕ್ತ ಅಧಿಕಾರಿಗಳ ಪ್ರಕಾರ, ಯಲಹಂಕದ ಅತ್ತೂರು ನಿವಾಸಿ … Read more

ಕಾರು ನಾಲೆಗೆ ಬಿದ್ದು ತಾಯಿ, ಮಗು ಸಾವು

ಹಾಸನ: ಸ್ವಿಫ್ಟ್ ಕಾರು ನಾಲೆಗೆ ಉರುಳಿ ಬಿದ್ದ ಪರಿಣಾಮ ಕಾರಿನಲ್ಲಿದ್ದ ತಾಯಿ ಮತ್ತು ಮಗು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಉಳಿದ ನಾಲ್ವರು ಗಂಭೀರವಾಗಿ ಗಾಯಗೊಂಡ ಘಟನೆ ಚನ್ನರಾಯಪಟ್ಟಣ ತಾಲ್ಲೂಕಿನ ಮಲ್ಲನಘಟ್ಟ ಗ್ರಾಮದ ಬಳಿ ನಡೆದಿದೆ. ಮೃತರನ್ನು ಪ್ರಿಯಾಂಕ (30), ಮಗು ವೈಭವ್ (ಒಂದೂವರೆ ವರ್ಷ) ಎಂದು ಗುರುತಿಸಲಾಗಿದೆ. ಬೆಂಗಳೂರಿನ ದೇವನಹಳ್ಳಿ ನಿವಾಸಿಗಳಾದ ಮಂಜುನಾಥ್, ಪತ್ನಿ ಪ್ರಿಯಾಂಕ, ಪುತ್ರ ವೈಭವ್, ಸಂಬAಧಿಗಳಾದ ಚಂದನ್, ದಿಲೀಪ್, ದೇವರಾಜು ಅವರು ಸ್ವಿಫ್ಟ್ ಕಾರಿನಲ್ಲಿ ಧರ್ಮಸ್ಥಳಕ್ಕೆ ಹೋಗಿ ವಾಪಾಸ್ ಆಗುತ್ತಿದ್ದಾಗ ಚಾಲಕನ ನಿಯಂತ್ರಣ ತಪ್ಪಿ … Read more

ತಿರುಪತಿ ಲಡ್ಡುಗೆ 2 ಲಕ್ಷ ಕೆಜಿ ತುಪ್ಪ *ಬಮುಲ್- ಟಿಟಿಡಿ ಒಪ್ಪಂದ: ಡಿ.ಕೆ.ಸುರೇಶ್ ಮಾಹಿತಿ

ಬೆಂಗಳೂರು: ಬೆಂಗಳೂರು ಸಹಕಾರಿ ಹಾಲು ಒಕ್ಕೂಟದಿಂದ (ಬಮುಲ್) ತಿರುಮಲ ತಿರುಪತಿ ದೇವಸ್ಥಾನದ (ಟಿಟಿಡಿ) ಲಡ್ಡು ಪ್ರಸಾದಕ್ಕೆ ನಂದಿನಿ ತುಪ್ಪ ಪೂರೈಸುವ ಮಹತ್ವದ ಒಪ್ಪಂದವನ್ನು ಮಾಡಿಕೊಂಡಿದೆ. ಈ ಒಪ್ಪಂದದ ಅಡಿಯಲ್ಲಿ, ಬಮುಲ್ ಮುಂದಿನ ಆರು ತಿಂಗಳ ಅವಧಿಗೆ ಸುಮಾರು 2 ಲಕ್ಷ ಕೆಜಿ ತುಪ್ಪವನ್ನು ಟಿಟಿಡಿಗೆ ಸರಬರಾಜು ಮಾಡಲಿದೆ. ಪ್ರತಿದಿನ 11.5ರಿಂದ 12 ಟನ್ ನಂದಿನಿ ತುಪ್ಪವನ್ನು ತಿರುಪತಿಗೆ ಕಳುಹಿಸಲಾಗುವುದು ಎಂದು ಬಮುಲ್ ಅಧ್ಯಕ್ಷ ಡಿ.ಕೆ.ಸುರೇಶ್ ತಿಳಿಸಿದರು. ಸುಮಾರು 136 ಕೋಟಿ ರೂ. ವೆಚ್ಚದಲ್ಲಿ ತುಪ್ಪ ಪೂರೈಕೆ ಮಾಡುತ್ತೇವೆ. … Read more

ಬಾಲಗರ್ಭಿಣಿಯರ ಸ್ಕ್ಯಾನಿಂಗ್: ಮೂವರು ವೈದ್ಯರ ಬಂಧನ

ಮಂಡ್ಯ: ಭ್ರೂಣಲಿಂಗ ಪತ್ತೆಗಾಗಿ 31 ಬಾಲಗರ್ಭಿಣಿಯರಿಗೆ ಕಾನೂನು ಬಾಹಿರವಾಗಿ ಸ್ಕ್ಯಾನಿಂಗ್ ಮಾಡಿರುವ ಆರೋಪದಡಿ ಮೂವರು ವೈದ್ಯರನ್ನು ಪೊಲೀಸರು ಬಂಧಿಸಿ, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಕೆ.ಆರ್.ಪೇಟೆಯ ಚೇತನ ಮೆಟರ್ನಿಟಿ ಸೆಂಟರ್‌ನ ಡಾ.ದಿವ್ಯಾ ಚೇತನ, ನಾವಿ ಡಯಾಗ್ನಸ್ಟಿಕ್ ಸೆಂಟರ್ ಡಾ.ಹರ್ಷಿತ್ ಮತ್ತು ಕುಶಾಲ್ ಡಯಾಗ್ನಸ್ಟಿಕ್ ಸೆಂಟರ್‌ನ ಡಾ.ಹರೀಶ್ ಬಂಧಿತ ವೈದ್ಯರು. ಇಲ್ಲಿನ ಸರ್ಕಾರಿ ಆಸ್ಪತ್ರೆಯ ಸ್ತ್ರೀರೋಗ ತಜ್ಞೆ ಪ್ರಿಯಾಂಕಾ ತಲೆಮರೆಸಿ ಕೊಂಡಿದ್ದಾರೆ. ಪೊಲೀಸರು ಶೋಧ ಮುಂದುವರಿಸಿದ್ದಾರೆ. ಪಟ್ಟಣ ಮತ್ತು ಗ್ರಾಮಾಂತರ ಠಾಣೆಗಳಲ್ಲಿ ಒಟ್ಟು 17 ಆರೋಪಿಗಳ ವಿರುದ್ಧ 12 ಪ್ರತ್ಯೇಕ … Read more