ನಿದ್ದೆ ಇಲ್ಲದೆ ಕಣ್ಣೀರಿಟ್ಟ ವಿನಯ್

ಬೆಂಗಳೂರು: ಯೋಗೇಶ್ ಗೌಡ ಕೊಲೆ ಪ್ರಕರಣದ ಅಪರಾಧಿ, ಶಾಸಕ ವಿನಯ್ ಕುಲಕರ್ಣಿ ಪರಪ್ಪನ ಅಗ್ರಹಾರ ಜೈಲು ಸೇರಿದ್ದಾರೆ. ಪರಪ್ಪನ ಅಗ್ರಹಾರ ಜೈಲಿನಲ್ಲಿ ನಿನ್ನೆ ಇಡೀ ರಾತ್ರಿ ನಿದ್ದೆ ಮಾಡಿಲ್ಲ ಎನ್ನಲಾಗಿದೆ. ತಡರಾತ್ರಿ ವೇಳೆಗೆ ಅಪರಾಧಿ ಕುಲಕರ್ಣಿ ಜೈಲುಪಾಲಾದರು. ಸೆಲ್ ಒಳಗೆ ಹೋಗುತ್ತಿದ್ದಂತೆ ಮತ್ತೆ ಕಣ್ಣೀರು ಹಾಕಿದರು. ಇಲ್ಲಿವರೆಗೂ ಕುಲಕರ್ಣಿ ಊಟ ಮಾಡಿಲ್ಲ ಎನ್ನಲಾಗಿದೆ. ಜೈಲಾಧಿಕಾರಿಗಳು ಎಲ್ಲರಿಗೂ ಸಿಟಿಪಿ ನಂಬರ್ ಅನ್ನು ನೀಡಿದ್ದಾರೆ. ಎಲ್ಲರನ್ನೂ ಕ್ವಾರಂಟೈನ್ ಸೆಲ್‌ ನಲ್ಲಿರಿಸಿದ್ದಾರೆ.

ವಿನಯ್ ಕುಲಕರ್ಣಿ ಇದ್ದ ಬಸ್ ನಲ್ಲಿ ಬೆಂಕಿ, ಹೊಗೆ

ಬೆಂಗಳೂರು: ಯೋಗೀಶ್ ಗೌಡ ಕೊಲೆ ಪ್ರಕರಣದ ಅಪರಾಧಿಗಳಾದ ಮಾಜಿ ಸಚಿವ ವಿನಯ್ ಕುಲಕರ್ಣಿ ಮತ್ತಿತರರನ್ನು ಪರಪ್ಪನ ಅಗ್ರಹಾರ ಕಾರಾಗೃಹಕ್ಕೆ ಸ್ಥಳಾಂತರಿಸುವಾಗ ಬಸ್‌ ನಲ್ಲಿ ತಾಂತ್ರಿಕ ದೋಷ ಉಂಟಾಗಿ ದಟ್ಟ ಹೊಗೆ ಆವರಿಸಿದ ಘಟನೆ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಸಮೀಪದಲ್ಲಿ ಸಂಭವಿಸಿದೆ. ಬಸ್‌ ನಲ್ಲಿ ಅಕಸ್ಮಿಕವಾಗಿ ತಾಂತ್ರಿಕ ದೋಷ ಉಂಟಾಗಿ ಬೆಂಕಿ ಕಾಣಿಸಿಕೊಂಡಿದೆ. ಇದರಿಂದ ಬಸ್‌ ನೊಳಗಿದ್ದ ಆರೋಪಿಗಳು ಹಾಗೂ ಸಿಬಿಐ ಭದ್ರತಾ ಸಿಬ್ಬಂದಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಯಿತು. ಆದರೆ ತಕ್ಷಣವೇ ಎಚ್ಚೆತ್ತುಕೊಂಡ ಸಿಬಿಐ ತಂಡ … Read more

ಹೊಂಚು ಹಾಕಿ ಡಿಕೆಶಿ ಸಂಚು: ಜೆಡಿಎಸ್ ವ್ಯಂಗ್ಯ

ಬೆಂಗಳೂರು: ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಕುರ್ಚಿ ಆಸೆಗಾಗಿ ತಮ್ಮ ವಿರೋಧಿ ಬಣದ ನಾಯಕರನ್ನು ಹೊಂಚು ಹಾಕಿ, ಸಂಚು ರೂಪಿಸಿ ಮುಗಿಸುತ್ತಿದ್ದಾರೆಂದು ಜೆಡಿಎಸ್ ಕಿಡಿಕಾರಿದೆ. ಕಾಂಗ್ರೆಸ್‌ನಿಂದ ಮುಸ್ಲಿಂ ನಾಯಕ ಅಬ್ದುಲ್ ಜಬ್ಬರ್ ಅಮಾನತು ವಿಚಾರವಾಗಿ ಎಕ್ಸ್ನಲ್ಲಿ ಪೋಸ್ಟ್ ಹಂಚಿಕೊಂಡಿದ್ದು, ಕಾಂಗ್ರೆಸ್ ಪಕ್ಷದಲ್ಲಿ ಸಾಮಾಜಿಕ ಅನ್ಯಾಯ ನಡೆಯುತ್ತಿದೆ. ಅಂದು ವಾಲ್ಮೀಕಿ ಜನಾಂಗದ ನಾಯಕ ಕೆ.ಎನ್.ರಾಜಣ್ಣ ಅವರನ್ನು ಸಚಿವ ಸ್ಥಾನದಿಂದ ಕಿತ್ತು ಹಾಕಿದ್ದರು. ಇಂದು ಅಲ್ಪಸಂಖ್ಯಾತ ಸಮುದಾಯದ ಅಬ್ದುಲ್ ಜಬ್ಬರ್ ಅವರನ್ನು ಪಕ್ಷದಿಂದ ಉಚ್ಚಾಟಿಸಲಾಗಿದೆ. ಕುರ್ಚಿ ಆಸೆಗಾಗಿ ಡಿಕೆ ಶಿವಕುಮಾರ್ ತಮ್ಮ … Read more

ಹೃದಯಾಘಾತದಿಂದ ನ್ಯಾಯಾಧೀಶೆ ಸಾವು

ತುಮಕೂರು: ಮಧುಗಿರಿ ತಾಲ್ಲೂಕಿನ ಹೆಚ್ಚುವರಿ ಸಿವಿಲ್ ಮತ್ತು ಜೆಎಂಎಫ್‌ಸಿ ನ್ಯಾಯಾಲಯದ ನ್ಯಾಯಾಧೀಶರಾದ ಎ.ಎನ್.ಕಾಂತಮ್ಮ (43) ಹೃದಯಾಘಾತದಿಂದ ಗುರುವಾರ ಮುಂಜಾನೆ ಸಾವನ್ನಪ್ಪಿದ್ದಾರೆ. ಪಟ್ಟಣದ ಲೋಕೋಪಯೋಗಿ ಇಲಾಖೆ ವಸತಿ ಗೃಹದಲ್ಲಿ ಅವರು ವಾಸವಿದ್ದರು. ಮಂಡ್ಯ ಜಿಲ್ಲೆ ಮಳವಳ್ಳಿ ತಾಲ್ಲೂಕಿನ ಅಂಚೆದೊಡ್ಡಿ ಗ್ರಾಮದವರು. ಅವಿವಾಹಿತರಾಗಿದ್ದ ಅವರು 2025 ಜೂನ್‌ನಿಂದ ಮಧುಗಿರಿಯಲ್ಲಿ ನ್ಯಾಯಾಧೀಶರಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಇಂದು ವಸತಿ ಗೃಹದಲ್ಲಿಯೇ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.

ರಾಜಕೀಯ ಬೇಡ: ಮೋದಿ

ನವದೆಹಲಿ: ಭಾರತದ ಪ್ರಜಾಪ್ರಭುತ್ವದ ಪಯಣದಲ್ಲಿ ಮಹಿಳಾ ಮೀಸಲಾತಿ ಜಾರಿ ಐತಿಹಾಸಿಕ ಕ್ಷಣವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು. ಪ್ರಸ್ತಾಪಿತ ಮಹಿಳಾ ಮೀಸಲು ಕಾಯ್ದೆಗೆ ತಿದ್ದುಪಡಿ ಕುರಿತ ಚರ್ಚೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಈ ವಿಷಯದಲ್ಲಿ ರಾಜಕೀಯ ಮಾಡದಂತೆ ಎಲ್ಲ ಸಂಸದರಿಗೆ ಮನವಿ ಮಾಡಿದರು. ಮಹಿಳಾ ಮೀಸಲಾತಿ ಮಸೂದೆ ವಿರೋಧಿಸುವವರು ದೀರ್ಘಕಾಲದವರೆಗೆ ಬೆಲೆ ತೆರಬೇಕಾಗುತ್ತದೆ. ನಮ್ಮ ಹಕ್ಕುಗಳ ವಿರುದ್ಧ ನಿಂತವರು ಯಾರು ಎಂಬುದನ್ನು ಮಹಿಳೆಯರು ಎಂದಿಗೂ ಮರೆಯುವುದಿಲ್ಲ ಎಂದು ಎಚ್ಚರಿಸಿದರು. ಭಾರತದ ಅಭಿವೃದ್ಧಿಯನ್ನು ಕೇವಲ ಮೂಲಸೌಕರ್ಯದಿಂದ ಅಳೆಯಲಾಗುವುದಿಲ್ಲ. … Read more

ಮುಸ್ಲಿಮರಿಗೆ ಮೀಸಲಾತಿ ನೀಡಲ್ಲ: ಅಮಿತ್ ಶಾ

ನವದೆಹಲಿ: ಮುಸ್ಲಿಮರಿಗೆ ಮೀಸಲಾತಿ ನೀಡುವುದಿಲ್ಲ. ಒಂದು ವೇಳೆ ಮೀಸಲಾತಿ ನೀಡಿದರೆ ಅದು ಧರ್ಮಾಧರಿತ ಮೀಸಲಾತಿ ಎನಿಸಿಕೊಳ್ಳುತ್ತದೆ. ಧರ್ಮಾಧರಿತ ಮೀಸಲಾತಿ ನೀಡುವುದಕ್ಕೆ ಸಂವಿಧಾನದಲ್ಲಿ ಅವಕಾಶವೇ ಇಲ್ಲ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದರು. ಲೋಕಸಭೆಯಲ್ಲಿ ಗುರುವಾರ ಮಹಿಳಾ ಮೀಸಲಾತಿ ಹಾಗೂ ಕ್ಷೇತ್ರ ಪುನರ್ ವಿಂಗಡಣೆ ಮಸೂದೆಗಳ ಮೇಲಿನ ಚರ್ಚೆಯಲ್ಲಿ ಮಾತನಾಡಿದ ಅವರು, ಮಹಿಳೆಯರಿಗೆ ಶೇ.33 ಮೀಸಲಾತಿ ನೀಡುತ್ತಿದ್ದೇವೆ ಎಂದರೆ ಮುಸ್ಲಿಮರಿಗೂ ಮೀಸಲಾತಿ ನೀಡುತ್ತಿದ್ದೇವೆ ಎಂದು ಅರ್ಥವಲ್ಲ ಎಂದು ಹೇಳಿದರು. ಸಂಸದರಾದ ಅಖಿಲೇಶ್ ಯಾದವ್ ಹಾಗೂ ಧರ್ಮೆಂದ್ರ … Read more

ಅಪ್ರಾಪ್ತ ಬಾಲಕಿಯರ ಗರ್ಭಧಾರಣೆ: ಪೋಕ್ಸೋ ಕಾಯ್ದೆಯಡಿ ಮಾಹಿತಿ ಕಡ್ಡಾಯ

ಬೆಂಗಳೂರು: ಅಪ್ರಾಪ್ತ ವಯಸ್ಸಿನ ಗರ್ಭಧಾರಣೆ ಪ್ರಕರಣಗಳ ಬಗ್ಗೆ ಖಾಸಗಿ ಆಸ್ಪ್ರತ್ರೆಗಳು ಪೋಕ್ಸೋ ಕಾಯ್ದೆಯಡಿ ವರದಿ ಮಾಡುವುದು ಕಡ್ಡಾಯ ಎಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಖಾಸಗಿ ಆಸ್ಪತ್ರೆಗಳು ಪೋಕ್ಸೋ ಕಾಯ್ದೆಯಡಿಯಲ್ಲಿ ಬರುವ ಎಲ್ಲಾ ಪ್ರಕರಣಗಳನ್ನು ಮತ್ತು ವಿಶೇಷವಾಗಿ ಅಪ್ರಾಪ್ತ ವಯಸ್ಸಿನ ಗರ್ಭಧಾರಣೆ ಪ್ರಕರಣಗಳನ್ನು ವರದಿ ಮಾಡುವುದು ಕಡ್ಡಾಯವಾಗಿದೆ ಎಂದು ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ಮಕ್ಕಳ ಸುರಕ್ಷತೆಗೆ ಸಂಬಂಧಿಸಿದ ವಿಷಯಗಳಲ್ಲಿ ಸರ್ಕಾರ ಯಾವುದೇ ನಿರ್ಲಕ್ಷ್ಯ ಅಥವಾ ಕಾನೂನಿನ ಉಲ್ಲಂಘನೆಯನ್ನು ಸಹಿಸುವುದಿಲ್ಲ. ರಾಜ್ಯ ಆರೋಗ್ಯ ಇಲಾಖೆ ಈಗಾಗಲೇ ಈ … Read more

7 ವರ್ಷ ಸೇವೆ ನಂತರ ಅಂತರ್ ಜಿಲ್ಲಾ ವರ್ಗಾವಣೆಗೆ ಅರ್ಹ: ಪರಂ

ಬೆಂಗಳೂರು: ವರ್ಗಾವಣೆ ನಿಯಮಗಳ ಪ್ರಕಾರ ಸರ್ಕಾರಿ ಸಿಬ್ಬಂದಿ ಒಂದು ಜಿಲ್ಲೆಯಲ್ಲಿ ಕನಿಷ್ಠ ಏಳು ವರ್ಷ ಕರ್ತವ್ಯ ಸಲ್ಲಿಸಿದ ನಂತರವಷ್ಟೇ ಅಂತರ್ ಜಿಲ್ಲಾ ವರ್ಗಾವಣೆಗೆ ಅರ್ಜಿ ಸಲ್ಲಿಸಲು ಅರ್ಹರು ಎಂದು ಗೃಹ ಸಚಿವ ಜಿ.ಪರಮೇಶ್ವರ್ ತಿಳಿಸಿದರು. ಅಂತರ್ ಜಿಲ್ಲಾ ವರ್ಗಾವಣೆ ಸಿಗದೆ ಕಂಗಾಲಾಗಿರುವ ಕಾನ್‌ ಸ್ಟೆಬಲ್‌ ಗಳು ದಯಾಮರಣ ಕೋರಿ ರಾಜ್ಯಪಾಲರಿಗೆ ಪತ್ರ ಬರೆದಿರುವ ಬಗ್ಗೆ ಪ್ರತಿಕ್ರಿಯಿಸಿದ ಅವರು, ಏಳು ವರ್ಷ ತುಂಬಿದ ತಕ್ಷಣ ವರ್ಗಾವಣೆ ಖಚಿತ ಎಂದಲ್ಲ. ಅರ್ಜಿದಾರರ ಹಿರಿತನ ಮತ್ತು ಆ ಜಿಲ್ಲೆಯಲ್ಲಿ ಲಭ್ಯವಿರುವ ಖಾಲಿ … Read more

ಚಿನ್ನದ ಬೆಲೆ ಭಾರೀ ಏರಿಕೆ

ಬೆಂಗಳೂರು: ಅಮೆರಿಕ-ಇರಾನ್ ನಡುವೆ ಕದನ ವಿರಾಮ ಹಿನ್ನೆಲೆಯಲ್ಲಿ ತೈಲ ಬೆಲೆ ಇಳಿಕೆಯಾಗಿದೆ. ಆದರೆ, ಹೂಡಿಕೆ ಹೆಚ್ಚಳವಾದ ಹಿನ್ನೆಲೆಯಲ್ಲಿ ಬುಧವಾರ ಚಿನ್ನ ಬೆಳ್ಳಿ ದರಗಳು ಭಾರಿ ಏರಿಕೆ ಕಂಡಿವೆ. 24 ಕ್ಯಾರೆಟ್ 10 ಗ್ರಾಂ ಚಿನ್ನ 3,980 ರೂ ಏರಿಕೆ ಆಗಿ 1,53,820 ರೂ. ಬೆಲೆ ದಾಖಲಾಗಿದೆ. 1 ಗ್ರಾಂ ಬೆಲೆ 15,382 ರೂ.ಗೆ ಏರಿಕೆ ಆಗಿದೆ. 22 ಕ್ಯಾರೆಟ್ 1 ಗ್ರಾಂ ಚಿನ್ನದ ಬೆಲೆ 365 ರೂ ಏರಿಕೆ ಆಗಿ 14,100 ರೂ ಆಗಿದೆ. 10 ಗ್ರಾಂ … Read more

ಕದನ ವಿರಾಮ ಬೆನ್ನಲ್ಲೇ ಕಚ್ಚಾತೈಲ ಬೆಲೆ ಭಾರೀ ಕುಸಿತ

ಲಂಡನ್: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ 14 ದಿನಗಳ ಕದನ ವಿರಾಮ ಘೋಷಿಸಿದ ಬೆನ್ನಲ್ಲೇ ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ದರ ಭಾರೀ ಕುಸಿತವಾಗಿದೆ. ಒಂದೇ ದಿನ ಸುಮಾರು ಶೇ.13 ರಿಂದ 17ರಷ್ಟು ಕುಸಿದಿದೆ. ಕಳೆದ ಆರು ವರ್ಷಗಳಲ್ಲೇ ಒಂದೇ ದಿನ ಕಂಡ ಅತಿ ದೊಡ್ಡ ಕುಸಿತ ಇದಾಗಿದೆ. ಅಮೆರಿಕದ ವೆಸ್ಟ್ ಟೆಕ್ಸಾಸ್ ಇಂಟರ್ಮೀಡಿಯೇಟ್ ಕಚ್ಚಾತೈಲದ ಬೆಲೆ ಸುಮಾರು 16.13 ಡಾಲರ್ (14.3%) ಇಳಿಕೆಯಾಗಿ ಪ್ರತಿ ಬ್ಯಾರೆಲ್‌ಗೆ 96.82 ಡಾಲರ್ (8,940 ರೂ.) ತಲುಪಿದೆ. ಜಾಗತಿಕ ಮಾನದಂಡವಾದ … Read more