ಕಾಡಾನೆ ದಾಳಿ: ಕಾಫಿ ಎಸ್ಟೇಟ್ ಮಾಲೀಕ ಸಾವು

ಮಡಿಕೇರಿ: ಕಾಡಾನೆ ದಾಳಿಗೆ ಕಾಫಿ ಬೆಳೆಗಾರ ಬಲಿಯಾದ ಘಟನೆ ಪೊನ್ನಂಪೇಟೆ ತಾಲೂಕಿನ ಶ್ರೀಮಂಗಲದಲ್ಲಿ ನಡೆದಿದೆ. ಕಾಯಿಮಾನಿ ನಿವಾಸಿ ರತ್ತು ಆನೆ ದಾಳಿಯಲ್ಲಿ ಸಾವನ್ನಪ್ಪಿದ ಕಾಫಿ ಬೆಳೆಗಾರ. ಬುಧವಾರ ಬೆಳಗ್ಗೆ ರತ್ತು ಅವರು ಕುರ್ಚಿ-ಕಾಯಿಮಾನಿ ನಡುವೆ ಇರುವ ತಮ್ಮ ಕಾಫಿ ತೋಟಕ್ಕೆ ನಡೆದುಕೊಂಡು ಹೋಗುತ್ತಿದ್ದ ವೇಳೆ ಎದುರಾದ ಕಾಡಾನೆ ದಾಳಿ ನಡೆಸಿ, ತುಳಿದು ಸಾಯಿಸಿದೆ. ಕಳೆದ ಕೆಲವು ದಿನಗಳಿಂದ ಶ್ರೀಮಂಗಲ ಹೋಬಳಿಯ ಕುರ್ಚಿ ಮತ್ತು ಕಾಯಿಮಾನಿ ಭಾಗದಲ್ಲಿ ಸುಮಾರು 8 ರಿಂದ 10 ಕಾಡಾನೆಗಳ ಹಿಂಡು ಬೀಡುಬಿಟ್ಟಿವೆ.

ಸ್ವಾಮೀಜಿ ವಿರುದ್ಧ ದೂರು: ಸಂತ್ರಸ್ತ ಮಹಿಳೆ ನಾಪತ್ತೆ?

ಬೆಂಗಳೂರು: ಕೂಡಲಸಂಗಮದ ಪಂಚಮಸಾಲಿ ಪೀಠದ ಜಯಮೃತ್ಯುಂಜಯ ಸ್ವಾಮೀಜಿ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಮಾಡಿ ರಾಜ್ಯ ಮಹಿಳಾ ಆಯೋಗಕ್ಕೆ ದೂರು ನೀಡಿದ್ದ ಮಹಿಳೆ ನಾಪತ್ತೆ ಆಗಿದ್ದಾರೆ ಎನ್ನಲಾಗದೆ. ಪಂಚಮಸಾಲಿ ಸಮುದಾಯದ ಮೀಸಲಾತಿ ಹೋರಾಟದ ನೇತೃತ್ವ ವಹಿಸಿಕೊಂಡಿದ್ದ ಜಯಮೃತ್ಯುಂಜಯ ಸ್ವಾಮೀಜಿ ವಿರುದ್ಧ ಬೆಂಗಳೂರಿನ ಮಹಿಳೆ ದೂರು ನೀಡಿದ್ದರು. ಸ್ವಾಮೀಜಿ ನನ್ನ ಖಾಸಗಿ ವಿಡಿಯೋ ಮಾಡಿಕೊಂಡು ಕಿರುಕುಳ ನೀಡುತ್ತಿದ್ದಾರೆಂದು ಆರೋಪಿಸಿ ದೂರು ಸಲ್ಲಿಸಿದ್ದರು. ಗಂಭೀರ ಆರೋಪ ಮಾಡಿದ್ದ ಮಹಿಳೆ ವಿರುದ್ಧ ಸ್ವಾಮೀಜಿ ಪ್ರತಿದೂರು ದಾಖಲಿಸುತ್ತಿದ್ದಂತೆ ಮಹಿಳೆ ನಾಪತ್ತೆಯಾಗಿದ್ದಾರೆ. ಮಹಿಳೆಯನ್ನು ಸಂಪರ್ಕಿಸಲು … Read more

ರೆಪೊ ದರ ಯಥಾಸ್ಥಿತಿ

ನವದೆಹಲಿ: ಹಣಕಾಸು ನೀತಿ ಸಮಿತಿಯು ರೆಪೊ ದರವನ್ನು ಹಾಲಿ ಇರುವ ದರದಲ್ಲೇ ಮುಂದುವರೆಸಲು ನಿರ್ಧರಿಸಿದೆ. ಹಣದುಬ್ಬರವನ್ನು ಶೇ.4.6 ಎಂದು ಅಂದಾಜಿಸಿದೆ. ಹಣಕಾಸು ನೀತಿ ಸಮಿತಿಯು ರೆಪೊ ದರವನ್ನು ಶೇ.5.25ರಲ್ಲಿ ಯಥಾಸ್ಥಿತಿಯಲ್ಲಿಡಲು ಮತ್ತು ತಟಸ್ಥ ನಿಲುವನ್ನು ಕಾಯ್ದುಕೊಳ್ಳಲು ನಿರ್ಧರಿಸಿದೆ ಎಂದು ಆರ್‌ಬಿಐ ಗವರ್ನರ್ ಸಂಜಯ್ ಮಲ್ಹೋತ್ರಾ ತಿಳಿಸಿದರು. ಮೊನ್ನೆಯಿಂದ ನಡೆದ ಆರ್‌ಬಿಐ ಎಂಪಿಸಿ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.

ರೈಲಿನಲ್ಲಿ 20.24 ಲಕ್ಷ ಮೌಲ್ಯದ ಗಾಂಜಾ ವಶ

ಬಳ್ಳಾರಿ: ರೈಲ್ವೇ ಪೊಲೀಸರು ಮಿಂಚಿನ ಕಾರ್ಯಾಚರಣೆ ನಡೆಸಿ ರೈಲಿನಲ್ಲಿ ಸಾಗಿಸುತ್ತಿದ್ದ 20.24 ಲಕ್ಷ ಮೌಲ್ಯದ 40.49 ಕೆ.ಜಿ ಗಾಂಜಾ ವಶಕ್ಕೆ ಪಡೆದಿದ್ದಾರೆ. ವಾಸ್ಕೋ ಡ ಗಾಮಾ ಶಾಲಿಮರ್ ಅಮರಾವತಿ ಎಕ್ಸಪ್ರೆಸ್ ರೈಲಿನಲ್ಲಿ ಗಾಂಜಾ ಸಾಗಾಟ ಮಾಡಲಾಗುತ್ತಿತ್ತು. ಶ್ವಾನದಳದ ಮೂಲಕ ದಾಳಿ ಮಾಡಿದ ರೈಲ್ವೇ ಪೊಲೀಸರು ಗಾಂಜಾ ವಶಕ್ಕೆ ಪಡೆದಿದ್ದಾರೆ. ರೈಲಿನ ಜನರಲ್ ಬೋಗಿಯ ಸೀಟ್ ಕೆಳಗಡೆ ಪ್ಯಾಕ್ ಮಾಡಿ ಗಾಂಜಾ ಇಟ್ಟಿದ್ದರು. ಶ್ವಾನದಳದ ಮೂಲಕ 19 ಬಂಡಲ್ ನಲ್ಲಿದ್ದ 20.24 ಲಕ್ಷ ಮೌಲ್ಯದ ಗಾಂಜಾ ವಶಕ್ಕೆ ಪಡೆದಿದ್ದಾರೆ. … Read more

ಪ್ರಮುಖ ವಲಯಗಳಿಗೆ ಗ್ಯಾಸ್: ಆದ್ಯತೆಗೆ ಸೂಚನೆ

ನವದೆಹಲಿ: ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು ಪ್ರಮುಖ ವಲಯಗಳಿಗೆ ಎಲ್‌ಪಿಜಿ ಹಂಚಿಕೆ ಮಾಡಲು ಆದ್ಯತೆ ನೀಡುವಂತೆ ಕೇಂದ್ರ ಸರ್ಕಾರ ಸೂಚಿಸಿದೆ. ಪ್ರಮುಖ ಉದ್ಯಮಗಳು ತಮ್ಮ ಎಲ್‌ಪಿಜಿ ಅಗತ್ಯಗಳಲ್ಲಿ ಶೇ.70ರಷ್ಟು ಪಡೆಯಲಿವೆ. ಔಷಧ, ಆಹಾರ, ಪಾಲಿಮರ್ ಮತ್ತು ಕೃಷಿಯಂತಹ ಕ್ಷೇತ್ರಗಳಿಗೆ ಹೆಚ್ಚಿನ ಅನಿಲ ಪೂರೈಕೆ ಅಗತ್ಯ. ಪ್ಯಾಕೇಜಿಂಗ್, ಪೇಂಟ್, ಯುರೇನಿಯಂ, ಹೆವಿ ವಾಟರ್, ಸ್ಟೀಲ್, ಸೀಡ್, ಮೆಟಲ್, ಸೆರಾಮಿಕ್, ಫೌಂಡ್ರಿ, ಫೋರ್ಜಿಂಗ್, ಗ್ಲಾಸ್ ಮತ್ತು ಏರೋಸಾಲ್ ಸೇರಿದಂತೆ ಇತರ ಘಟಕಗಳು ಇದರಲ್ಲಿ ಸೇರಿವೆ. ಭಾರತದ ಎಲ್‌ಪಿಜಿ ಆಮದುಗಳಲ್ಲಿ ಹೆಚ್ಚಿನ … Read more

ನಾಳೆ ದ್ವಿತೀಯ ಪಿಯು ಫಲಿತಾಂಶ

ಬೆಂಗಳೂರು: ದ್ವೀತಿಯ ಪಿಯುಸಿ ಪರೀಕ್ಷೆ ಫಲಿತಾಂಶ ಏಪ್ರಿಲ್ 9ರಂದು (ಗುರುವಾರ) ಬೆಳಗ್ಗೆ ಪ್ರಕಟವಾಗಲಿದೆ ಎಂದು ಪರೀಕ್ಷಾ ಮಂಡಳಿ ಪ್ರಕಟಿಸಿದೆ. ಇಂದು ಮಂಗಳವಾರ ಫಲಿತಾಂಶ ಪ್ರಕಟವಾಗಬೇಕಿತ್ತು. ಕಾರಣವೇ ಇಲ್ಲದೇ ಫಲಿತಾಂಶ ಪ್ರಕಟ ಮುಂದೂಡಿಕೆ ಮಾಡಿತ್ತು. ಈ ಬೆನ್ನಲ್ಲೇ ಫಲಿತಾಂಶ ಪ್ರಕಟಣೆ ಅಂತಿಮ ದಿನಾಂಕವನ್ನೂ ಬಿಡುಗಡೆ ಮಾಡಿದೆ. ಏಪ್ರಿಲ್ 9ರ ಬೆಳಗ್ಗೆ ಸಚಿವರು ನಡೆಸುವ ಸುದ್ದಿಗೋಷ್ಠಿಯಲ್ಲಿ ಫಲಿತಾಂಶ ಪ್ರಕಟವಾಗಲಿದೆ. ಮಧ್ಯಾಹ್ನದ ನಂತರ ಇಲಾಖೆ ವೆಬ್‌ಸೈಟ್ ನಲ್ಲಿ ಫಲಿತಾಂಶ ಲಭ್ಯವಾಗಲಿದೆ ಎಂದು ಪರೀಕ್ಷಾ ಮಂಡಳಿ ಮಾಹಿತಿ ನೀಡಿದೆ. ಫೆಬ್ರವರಿ 28ರಿಂದ ಮಾರ್ಚ್ … Read more

ಡಿಕೆಶಿ ಇವತ್ತೇ ಸಿಎಂ ಆಗ್ತಾರೆ ಅಂತ ಹೇಳಿದ್ದೀನಾ?: ಡಿಕೆಸು

ಬೆಂಗಳೂರು: ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿ ಆಗಬೇಕೆಂಬ ಆಸೆಯಿದೆ. ಆದರೆ ಅವರು ಇವತ್ತೇ ಸಿಎಂ ಆಗ್ತಾರೆ ಅಂತ ನಾನು ಹೇಳಿದ್ದೀನಾ?. ಇದರ ಬಗ್ಗೆ ಸಮಯ ಬಂದಾಗ ಮಾತಾಡೋಣ ಎಂದು ಮಾಜಿ ಸಂಸದ ಡಿ.ಕೆ.ಸುರೇಶ್ ಪ್ರತಿಕ್ರಿಯೆ ನೀಡಿದ್ದಾರೆ. ಸಿದ್ದರಾಮಯ್ಯ ಇನ್ನೂ ಎರಡು ವರ್ಷ ಸಿಎಂ ಆಗಿ ಮುಂದುವರೆಯಲಿದ್ದಾರೆAಬ ಪರಮೇಶ್ವರ್ ಹೇಳಿಕೆ ವಿಚಾರಕ್ಕೆ ಪ್ರತಿಕಿಯಿಸಿದ ಅವರು, ಇದು ನನಗೆ ಗೊತ್ತಿಲ್ಲ. ಅವರನ್ನೇ ಕೇಳಬೇಕು. ಅವರು ಗೃಹ ಸಚಿವರಾಗಿದ್ದಾರೆ. ಅವರು ಹೇಳಿದನ್ನು ನಾವು ಕೇಳಬೇಕಾಗುತ್ತದೆಂದು ವ್ಯಂಗ್ಯವಾಡಿದರು. ಕ್ಷೇತ್ರ ಪುನರ್ ವಿಂಗಡಣೆ ವಿಚಾರಕ್ಕೆ ಪ್ರತಿಕ್ರಿಯಿಸಿದ … Read more

ಗುತ್ತಿಗೆದಾರ ಶವವಾಗಿ ಪತ್ತೆ

ಮಂಡ್ಯ: ನಾಲ್ಕು ದಿನಗಳ ಹಿಂದೆ ಕಾಣೆಯಾಗಿದ್ದ ಪ್ರಥಮ ದರ್ಜೆ ಗುತ್ತಿಗೆದಾರ ಅನುಮಾನಾಸ್ಪದ ರೀತಿಯಲ್ಲಿ ಕಾವೇರಿ ನದಿಯಲ್ಲಿ ಶವವಾಗಿ ಪತ್ತೆಯಾಗಿರುವ ಘಟನೆ ಶ್ರೀರಂಗಪಟ್ಟಣದಲ್ಲಿ ನಡೆದಿದೆ. ಶ್ರೀರಂಗಪಟ್ಟಣ ತಾಲೂಕಿನ ಹುಣಸನಹಳ್ಳಿ ಗ್ರಾಮದ ಪವನ್ (27) ಅನುಮಾನಸ್ಪದ ಸಾವನ್ನಪ್ಪಿರುವ ಪ್ರಥಮ ದರ್ಜೆ ಗುತ್ತಿಗೆದಾರ. ಪವನ್ ಕೋಟ್ಯಂತರ ರೂ. ಮೌಲ್ಯದ ಎಲೆಕ್ಟ್ರಿಕ್ ಕಾಮಗಾರಿ ನಡೆಸುತ್ತಿದ್ದರು. ಏ.2ರಂದು ಮನೆಯಿಂದ ಕೆಲಸದ ಸ್ಥಳಕ್ಕೆ ಹೋಗುತ್ತೇನೆ ಎಂದು ತೆರಳಿದ್ದ ಪವನ್ ಮನೆಗೆ ವಾಪಸ್ ಬಂದಿರಲಿಲ್ಲ. ನಾಪತ್ತೆ ಬಳಿಕ ಪವನ್ ಫೋನ್ ಸ್ಪೀಚ್ ಆಫ್ ಆಗಿತ್ತು. ಸಾಮಾಜಿಕ ಜಾಲತಾಣದ … Read more

ಏ.10ರಿಂದ ನಗದು ರಹಿತ ಟೋಲ್

ನವದೆಹಲಿ: ದೇಶದ ಎಲ್ಲಾ ಟೋಲ್ ಗಳನ್ನ ಡಿಜಿಟಲೀಕರಣಗೊಳಿಸುವತ್ತ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಮಹತ್ವದ ಹೆಜ್ಜೆಯಿಟ್ಟಿದೆ. ಏಪ್ರಿಲ್ 10ರಿಂದ ಜಾರಿಯಾಗುವಂತೆ ದೇಶಾದ್ಯಂತ ಟೋಲ್ ಪ್ಲಾಜಾಗಳಲ್ಲಿ ನಗದು ಪಾವತಿ ವ್ಯವಸ್ಥೆ ಬಂದ್ ಆಗಲಿದೆ. ಟೋಲ್ ಪ್ಲಾಜಾ ಹಾದು ಹೋಗಲು ಫಾಸ್ಟ್ಟ್ಯಾಗ್ ಇಲ್ಲದ ವಾಹನಗಳಿಗೆ ಯುಪಿಐ ಮೂಲಕ ಪಾವತಿಸುವ ಪರ್ಯಾಯ ಆಯ್ಕೆ ನೀಡಲಾಗಿದೆ. ಆದರೆ, ಈ ಸೌಲಭ್ಯಕ್ಕೆ ಹೆಚ್ಚುವರಿ ಶುಲ್ಕ ವಿಧಿಸಲಾಗುತ್ತದೆ. ಯುಪಿಐ ವಹಿವಾಟು ನಡೆಸಿದಲ್ಲಿ ಸಾಮಾನ್ಯ ಟೋಲ್ ಶುಲ್ಕಕ್ಕಿಂತ ಶೇ.25ರಷ್ಟು ಹೆಚ್ಚುವರಿ ಹಣವನ್ನ ಚಾಲಕರು ಪಾವತಿಸಬೇಕಾಗುತ್ತದೆ. ಫಾಸ್ಟ್ಟ್ಯಾಗ್ ಮತ್ತು ಯುಪಿಐ … Read more

ಇರಾನ್ ಸರ್ವೋಚ್ಛ ನಾಯಕ ಮೊಜ್ತಬಾ ಪ್ರಜ್ಞಾಹೀನ ಸ್ಥಿತಿ?

ಟೆಹ್ರಾನ್: ಅಮೆರಿಕದ ಕದನ ವಿರಾಮಕ್ಕೆ ಒಪ್ಪದ ಇರಾನ್ ಮೇಲೆ ಭೀಕರ ದಾಳಿಯ ಎಚ್ಚರಿಕೆಯನ್ನು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಕೊಟ್ಟಿದ್ದಾರೆ. ಇಂತಹ ಸಂದಿಗ್ಧ ಪರಿಸ್ಥಿತಿಯಲ್ಲೇ ಇರಾನ್‌ಗೆ ದೊಡ್ಡ ಆಘಾತ ಎದುರಾಗಿದೆ. ಇರಾನ್‌ನ ಸರ್ವೋಚ್ಛ ನಾಯಕ ಮೊಜ್ತಬಾ ಖಮೇನಿ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದಾರೆ ಎಂದು ಇಸ್ರೇಲ್-ಅಮೆರಿಕ ಗುಪ್ತಚರ ಮೂಲ ಆಧರಿಸಿ ಅಲ್ಲಿನ ಮಾಧ್ಯಮಗಳು ವರದಿ ಮಾಡಿವೆ. ಮೊಜ್ತಬಾ ಪ್ರಜ್ಞಾಹೀನ ಸ್ಥಿತಿಗೆ ತಲುಪಿದ್ದಾರೆ. ಅವರನ್ನ ಕೋಮ್ ನಗರದ ರಹಸ್ಯ ಸ್ಥಳದಲ್ಲಿರಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಅಮೆರಿಕ ದಾಳಿ ಎಚ್ಚರಿಕೆ ನಡುವೆಯೇ ನಾಯಕತ್ವದ ಬಗ್ಗೆ ಪ್ರಶ್ನೆಗಳೂ … Read more