ಹಿಂದಿಗೆ ಗ್ರೇಡ್ ಪ್ರಶ್ನಿಸಿ ಪಿಐಎಲ್

ಬೆಂಗಳೂರು: ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ತೃತೀಯ ಭಾಷೆಗೆ ಅಂಕಗಳ ಬದಲಿಗೆ ಗ್ರೇಡ್ ನೀಡುವ ಸರ್ಕಾರದ ನಿರ್ಧಾರ ಪ್ರಶ್ನಿಸಿ ಹೈಕೋರ್ಟ್ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಕೆ ಮಾಡಲಾಗಿದೆ. ಬೆಂಗಳೂರಿನ ಎಚ್.ಎನ್.ಚಂದನಾ ಮತ್ತು ಎಸ್.ವೆಂಕಟೇಶ್ ಎಂಬುವವರು ಅರ್ಜಿ ಸಲ್ಲಿಸಿದ್ದಾರೆ. ಅರ್ಜಿಯಲ್ಲಿ ಶಾಲಾ ಶಿಕ್ಷಣ ಇಲಾಖೆ ಕಾರ್ಯದರ್ಶಿ, ಆಯುಕ್ತರು, ಶಿಕ್ಷಣ ಇಲಾಖೆ ಸಚಿವ ಮಧು ಬಂಗಾರಪ್ಪ ಅವರನ್ನು ಪ್ರತಿವಾದಿಗಳನ್ನಾಗಿ ಹೆಸರಿಸಿದ್ದಾರೆ. ಅರ್ಜಿಯಲ್ಲಿ ಸರ್ಕಾರದ ಕ್ರಮ ಸರಿಯಾಗಿಲ್ಲ. ಯಾವುದೇ ಶೈಕ್ಷಣಿಕ ಬದಲಾವಣೆ ಮಾಡುವ ಮುನ್ನ ಶಿಕ್ಷಣ ತಜ್ಞರ ಜೊತೆಯಲ್ಲಿ ಸಭೆ ಮಾಡಬೇಕು. ಶಿಕ್ಷಣ ತಜ್ಞರ … Read more

ಅಪಪ್ರಚಾರಕ್ಕೆ ನೊಂದು ವಿದ್ಯಾರ್ಥಿನಿ ಆತ್ಮಹತ್ಯೆ

ಚಿತ್ರದುರ್ಗ: ಅಧ್ಯಾಪಕನ ಜೊತೆ ಸಂಬಂಧ ಕಲ್ಪಿಸಿ ಗೆಳತಿಯರು ಅಪಪ್ರಚಾರ ನಡೆಸಿದ್ದ ಹಿನ್ನೆಲೆಯಲ್ಲಿ ಮನನೊಂದು ಬಿಎಎಂಎಸ್ ವಿದ್ಯಾರ್ಥಿನಿ ನೇಣಿಗೆ ಶರಣಾಗಿರುವ ಘಟನೆ ಚಿತ್ರದುರ್ಗ ಜಿಲ್ಲೆ ಹೊಳಲ್ಕೆರೆ ನಗರದ ಬಸವ ಲೇಔಟ್‌ನಲ್ಲಿ ನಡೆದಿದೆ. ನಿಖಿತಾ (23) ನೇಣಿಗೆ ಶರಣಾದ ವಿದ್ಯಾರ್ಥಿನಿ. ಡೆತ್ ನೋಟ್ ಬರೆದಿಟ್ಟು ನಿಖಿತಾ ನೇಣಿಗೆ ಶರಣಾಗಿದ್ದಾಳೆ. ಅಧ್ಯಾಪಕರೊಬ್ಬರ ಜೊತೆ ಸಂಬAಧ ಕಲ್ಪಿಸಿ ಅಪಪ್ರಚಾರ ಮಾಡುತ್ತಿದ್ದ ಹಿನ್ನೆಲೆ ಡೆತ್‌ನೋಟ್‌ನಲ್ಲಿ ಅಧ್ಯಾಪಕ ರಾಜು, ಪತ್ನಿ ನಿಶಾ ಹಾಗೂ ಕೆಲವು ವಿದ್ಯಾರ್ಥಿನಿಯರ ಹೆಸರು ಬರೆದಿಟ್ಟು ನಿಖಿತಾ ಆತ್ಮಹತ್ಯೆಗೆ ಶರಣಾಗಿದ್ದಾಳೆ. ಅವರ ವಿರುದ್ಧ … Read more

ರೂಪಾಯಿ ಮೌಲ್ಯ ದಾಖಲೆ ಏರಿಕೆ

ಮುಂಬೈ: ಭಾರತದ ರೂಪಾಯಿ 12 ವರ್ಷಗಳ ಬಳಿಕ ಡಾಲರ್ ವಿರುದ್ಧ ಒಂದೇ ದಿನ ಅತಿದೊಡ್ಡ ಏರಿಕೆ ದಾಖಲಿಸಿದೆ. ಮಾ.31ರಂದು ಒಂದು ಡಾಲರ್‌ಗೆ 95 ರೂ. ದಾಟಿದ್ದ ರೂಪಾಯಿ ಮೌಲ್ಯ ಗುರುವಾರ 93.14 ರೂ. ಅಸುಪಾಸಿನಲ್ಲಿ ವ್ಯವಹಾರ ನಡೆಸಿದೆ. ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ರೂ. ಮೌಲ್ಯ ಕುಸಿತ ತಡೆಗೆ ಹಲವು ಕ್ರಮಕೈಗೊಂಡ ಬಳಿಕ ರೂಪಾಯಿ ಮೌಲ್ಯ ಒಂದೇ ದಿನದಲ್ಲಿ ಸುಮಾರು ಶೇ.1.8ನಷ್ಟು ಏರಿಕೆ ಕಂಡಿದೆ. ಟ್ರಂಪ್ ಭಾಷಣದ ಬಳಿಕ ವಿಶ್ವದ ಷೇರು ಮಾರುಕಟ್ಟೆಗಳು ಕುಸಿದಿದ್ದವು. ಪರಿಣಾಮ ಬೆಳಗ್ಗೆ … Read more

ನೀರಿನಲ್ಲಿ ಮುಳುಗಿ ಮಗು ಸಾವು: ತಾಯಿಯೂ ಆತ್ಮಹತ್ಯೆ

ಬೆಂಗಳೂರು: ಒಣಹಾಕಿದ್ದ ಬಟ್ಟೆ ತರಲು ಹೋಗಿದ್ದ ವೇಳೆ ನೀರಿನ ಬಕೆಟ್‌ನಲ್ಲಿ ಮುಳುಗಿ ಮಗು ಸಾವನ್ನಪ್ಪಿದ್ದನ್ನು ನೋಡಿ ಶಾಕ್‌ಗೆ ಒಳಗಾದ ತಾಯಿ ಆತ್ಮಹತ್ಯೆ ಮಾಡಿಕೊಂಡ ದುರಂತ ಘಟನೆ ನಗರದ ಭೈರವೇಶ್ವರ ನಗರದಲ್ಲಿ ನಡೆದಿದೆ. ಮಗು ಅಗಸ್ತ್ಯ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದೆ. ತಾಯಿ ಪ್ರತಿಭಾ (29) ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮನೆಯಲ್ಲಿ ತಾಯಿ, ಮಗು ಇಬ್ಬರೇ ಇದ್ದಾಗ ಘಟನೆ ನಡೆದಿದೆ. ಪ್ರತಿಭಾ ಮತ್ತು ಮಹಂತೇಶ್ ಇಬ್ಬರೂ ಸಾಫ್ಟ್ವೇರ್ ಉದ್ಯೋಗಿಗಳಾಗಿದ್ದರು. ಪ್ರತಿಭಾ ವರ್ಕ್ ಫ್ರಂ ಹೋಂ ಮಾಡುತ್ತಿದ್ದರು. ಗಂಡ ಮಹಂತೇಶ್ ಕೆಲಸದ ನಿಮಿತ್ತ … Read more

ಸಿದ್ದಗಂಗಾ ಶ್ರೀ ಗದ್ದುಗೆಗೆ ರಾಷ್ಟ್ರಪತಿ ಮುರ್ಮು ಪೂಜೆ

ತ್ರಿವಿಧ ದಾಸೋಹಿ ಶಿವಕುಮಾರ ಶ್ರೀಗಳ ಜಯಂತಿ ಆಚರಣೆ ತುಮಕೂರು: ತ್ರಿವಿಧ ದಾಸೋಹಿ ಶ್ರೀ ಶಿವಕುಮಾರ ಸ್ವಾಮೀಜಿ ಜಯಂತಿ ಬುಧವಾರ ಸಿದ್ದಗಂಗಾ ಮಠದಲ್ಲಿ ವಿಜೃಂಭಣೆಯಿಂದ ನಡೆಯಿತು. ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಭೇಟಿ ನೀಡಿ, ಲಿಂಗೈಕ್ಯ ಶಿವಕುಮಾರ ಸ್ವಾಮೀಜಿ ಗದ್ದುಗೆಗೆ ಪೂಜೆ ಸಲ್ಲಿಸಿದರು. ನಂತರ ಮಠದ ಮಕ್ಕಳನ್ನು ಉದ್ದೇಶಿಸಿ ಮಾತನಾಡಿದರು. ರಾಜ್ಯಪಾಲ ಥಾವರಚಂದ್ ಗೆಹಲೋತ್, ಸಿದ್ಧಗಂಗಾ ಮಠದ ಸಿದ್ಧಲಿಂಗ ಸ್ವಾಮೀಜಿ, ಕೇಂದ್ರ ಜಲ ಶಕ್ತಿ, ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಹಾಜರಿದ್ದರು. ಸಿದ್ದಗಂಗಾ ಶ್ರೀ ಜಯಂತಿಯಲ್ಲಿ … Read more

ಭೀಕರ ಅಪಘಾತ: ವ್ಯಕ್ತಿ ಸಜೀವ ದಹನ

ಹುಳಿಯಾರು: ಕಾರೊಂದು ನಿಯಂತ್ರಣ ತಪ್ಪಿ ಸೇತುವೆಗೆ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಓರ್ವ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿ, ನಾಲ್ವರು ತೀವ್ರವಾಗಿ ಗಾಯಗೊಂಡಿರುವ ಘಟನೆ ಹುಳಿಯಾರು ಹೋಬಳಿಯ ಕೋರಗೆರೆ ಬಳಿ ನಡೆದಿದೆ. ತಿಮ್ಮನಹಳ್ಳಿ ಗ್ರಾಮದ ರಾಮಯ್ಯ (55) ಮೃತಪಟ್ಟ ದುರ್ದೈವಿ. ಇವರು ಬೆಳವಾಡಿ, ಹಾಗಲವಾಡಿ, ಬಿಳೆಕಲ್ಲು ಹಟ್ಟಿ ಗ್ರಾಮದ ಇತರ ನಾಲ್ವರೊಂದಿಗೆ ಅರಸೀಕೆರೆ ತಾಲ್ಲೂಕಿನ ಅಮ್ಮನಹಟ್ಟಿ ಮಾಳಮ್ಮ ದೇವಸ್ಥಾನಕ್ಕೆ ತೆರಳಿ ದರ್ಶನ ಮುಗಿಸಿ ಮರಳುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ. ಕೋರಗೆರೆ ಸಮೀಪದ ಸೇತುವೆಗೆ ಕಾರು ವೇಗವಾಗಿ … Read more

ಮದುವೆ ಮಾಡಿಸಲಿಲ್ಲವೆಂದು ತಾಯಿಯನ್ನೇ ಕೊಂದ ಮಗ

ಹಾಸನ: 40 ವರ್ಷವಾದ್ರೂ ನನಗಿನ್ನೂ ಮದುವೆ ಮಾಡಿಸಿಲ್ಲ ಎಂದು ಜಗಳ ತೆಗೆದ ಮಗ ತಾಯಿಯನ್ನೇ ಭೀಕರವಾಗಿ ಕೊಲೆ ಮಾಡಿರುವ ಘಟನೆ ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ಶ್ರವಣಬೆಳಗೊಳದಲ್ಲಿ ನಡೆದಿದೆ. ಗಂಗಮ್ಮ (65) ಕೊಲೆಯಾದ ಮಹಿಳೆ. ಉಮಾಶಂಕರ್ (40) ತಾಯಿಯನ್ನ ಕೊಂದ ಪುತ್ರ. ಕಳೆದ ವರ್ಷ ಕುಂಭಮೇಳಕ್ಕೆ ತೆರಳಿ ವಾಪಾಸ್ ಆಗುವಾಗ ನಡೆದ ಅಪಘಾತದಲ್ಲಿ ಆರೋಪಿ ಉಮಾಶಂಕರ್ ತಲೆಗೆ ಪೆಟ್ಟು ಬಿದ್ದಿತ್ತು. ಇದರಿಂದ ಒಮ್ಮೊಮ್ಮೆ ಬುದ್ದಿ ಭ್ರಮಣೆಯಾದವನಂತೆ ವರ್ತಿಸುತ್ತಿದ್ದ ಎನ್ನಲಾಗಿದೆ. ಪದೇ ಪದೇ ಮದುವೆ ಮಾಡಿಸುವಂತೆ ತಾಯಿ ಜೊತೆ … Read more

ರಾಜ್ಯದಲ್ಲಿ ಜನಗಣತಿ ಆರಂಭ ಇಂದಿನಿಂದ  ಸ್ವಯಂ ಗಣತಿ ಕೂಡ ಆರಂಭ

ಬೆಂಗಳೂರು: ರಾಜ್ಯದಲ್ಲಿ ಇಂದಿನಿAದ ಜನಗಣತಿ ಆರಂಭಗೊAಡಿದೆ. ಎರಡು ಹಂತಗಳಲ್ಲಿ ಜನಗಣತಿ ನಡೆಯಲಿದೆ. ಮೊದಲ ಹಂತದಲ್ಲಿ ಮನೆಗಳ ಗಣತಿ ಮತ್ತು 2ನೇ ಹಂತದಲ್ಲಿ ಜನಗಣತಿ ನಡೆಯಲಿದೆ. ಇಂದಿನಿAದ ಸ್ವಯಂ ಗಣತಿ ಕೂಡ ಆರಂಭವಾಗಿದೆ. ಸ್ವಯಂ ಗಣತಿಯಲ್ಲಿ ಸ್ವತಃ ಜನರೇ ಭಾಗವಹಿಸಿ ನೋಂದಣಿ ಮಾಡಿಕೊಳ್ಳಬಹುದು. ಗಣತಿ ವೆಬ್ ಪೋರ್ಟಲ್‌ನಲ್ಲಿ ಸ್ವಯಂ ಗಣತಿಯಲ್ಲಿ ಭಾಗವಹಿಸಬಹುದು. ಮನೆಯ ಯಾವುದೇ ಒಬ್ಬ ಸದಸ್ಯರು ವೆಬ್ ಪೋರ್ಟಲ್ ಮೂಲಕ ಮನೆಯ ವಿವರ ದಾಖಲಿಸಬಹುದು. ನೋಂದಣಿ ನಂತರ ಸ್ವಯಂಗಣತಿ ಐಡಿಯನ್ನ ಮೊಬೈಲ್ ಅಥವಾ ಇಮೇಲ್ ಮೂಲಕ ಪಡೆಯಬಹುದು. … Read more