ಜೂ.21ರಂದು ನೀಟ್ ಮರು ಪರೀಕ್ಷೆ ನಿಗದಿ

ನವದೆಹಲಿ: ನೀಟ್ ಯುಜಿ ಮರು ಪರೀಕ್ಷೆಯನ್ನು ಜೂನ್ 21ರಂದು ನಡೆಸಲಾಗುತ್ತದೆ ಎಂದು ರಾಷ್ಟ್ರೀಯ ಪರೀಕ್ಷಾ ಏಜೆನ್ಸಿ (ಎನ್’ಟಿಎ) ಅಧಿಕೃತವಾಗಿ ತಿಳಿಸಿದೆ. ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಅಕ್ರಮಗಳ ಆರೋಪದ ಹಿನ್ನೆಲೆಯಲ್ಲಿ ಮೇ 3ರಂದು ನಡೆದಿದ್ದ ನೀಟ್ ಪರೀಕ್ಷೆಯನ್ನು ರದ್ದುಗೊಳಿಸಿದ್ದರಿಂದ ಈಗ ಮರು ಪರೀಕ್ಷೆಯ ದಿನಾಂಕವನ್ನು ಪ್ರಕಟಿಸಲಾಗಿದೆ. ಕೇಂದ್ರೀಯ ತನಿಖಾ ದಳ ಈಗ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದ ತನಿಖೆ ನಡೆಸುತ್ತಿದೆ. ಹೆಚ್ಚಿನ ವಿವರಗಳಿಗಾಗಿ ಅಧಿಕೃತ ವೆಬ್‌ಸೈಟ್ ಅಥವಾ ಸಾಮಾಜಿಕ ಜಾಲತಾಣವನ್ನು ಮಾತ್ರ ಅವಲಂಬಿಸಬೇಕೆಂದು ತಿಳಿಸಿದೆ.

ಕಂಪ್ಯೂಟರ್ ಆಧಾರಿತ ನೀಟ್ ಮುಂದಿನ ವರ್ಷದಿಂದ ಜಾರಿ: ಕೇಂದ್ರ ಶಿಕ್ಷಣ ಸಚಿವ ಪ್ರಧಾನ್

ನವದೆಹಲಿ: ಮುಂದಿನ ವರ್ಷದಿಂದ ಕಂಪ್ಯೂಟರ್ ಆಧಾರಿತ ನೀಟ್ ಪರೀಕ್ಷೆ ನಡೆಸಲಾಗುವುದು. ಪ್ರಶ್ನೆ ಪರೀಕ್ಷೆಯ ಸೋರಿಕೆಯ ಜವಾಬ್ದಾರಿಯನ್ನು ತೆಗೆದುಕೊಂಡು ಪರೀಕ್ಷಾ ಮಾಫಿಯಾ ವಿರುದ್ಧ ಹೋರಾಡುತ್ತೇವೆ ಎಂದು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ತಿಳಿಸಿದರು. ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಸಂಬಂಧ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿದೆ. ಇದರ ಜವಾಬ್ದಾರಿ ನಾವು ತೆಗೆದುಕೊಳ್ಳುತ್ತೇವೆ. ಸಚಿವಾಲಯ ಇದನ್ನು ಸರಿಪಡಿಸಲಿದೆ. ಮೇ 3ರಂದು ನಡೆಸಲಾಗಿದ್ದ ನೀಟ್ ಪರೀಕ್ಷೆಯನ್ನು ಈಗಾಗಲೇ ರದ್ದುಗೊಳಿಸಲಾಗಿದೆ. ಜೂನ್ 21ಕ್ಕೆ ಮರುಪರೀಕ್ಷೆ ದಿನಾಂಕ ನಿಗದಿಪಡಿಸಲಾಗಿದೆ. ಮುಂದಿನ ವರ್ಷದಿಂದ … Read more

ಟ್ರ್ಯಕ್ಟರ್ ಗೆ ಟ್ಯಾಂಕರ್ ಡಿಕ್ಕಿ: ಮಗು ಸೇರಿ 7 ಮಂದಿ ಸಾವು

ಕೊಪ್ಪಳ: ಟ್ರ್ಯಕ್ಟರ್ ಮತ್ತು ಟ್ಯಾಂಕರ್ ಲಾರಿ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮಗು ಸೇರಿ ಏಳು ಮಂದಿ ಸಾವನ್ನಪ್ಪಿರುವ ದುರ್ಘಟನೆ ಕೊಪ್ಪಳ ಜಿಲ್ಲೆಯ ಮುನಿರಾಬಾದ್ ಬಳಿ ಶುಕ್ರವಾರ ನಡೆದಿದೆ. ಬಳ್ಳಾರಿ ಜಿಲ್ಲೆ ಸಂಡೂರು ತಾಲೂಕಿನ ಯಶವಂತ ನಗರ ಹಾಗೂ ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಮರ್ಲಾಯನಹಳ್ಳಿ ಗ್ರಾಮದ ನಿವಾಸಿಗಳಾದ ಕೆಂಚಪ್ಪ (35), ಮಹಾಂತೇಶ್ (18) ಭರತ್ (01) ಸವಿತಾ (12) ಮಾರೇಶ್, ಗೌರಮ್ಮ, ಮಂಜಮ್ಮ ಮೃತಪಟ್ಟವರು. 50ನೇ ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ಅಪಘಾತ ಸಂಭವಿಸಿದೆ. ಹಿಂದಿನಿಂದ … Read more

ನೀಟ್ ಅಕ್ರಮ: ಮೂವರ ಬಂಧನ

ಜೈಪುರ: 2025ರಲ್ಲಿ ನೀಟ್ ಪರೀಕ್ಷೆಯಲ್ಲಿ ತೇರ್ಗಡೆಯಾಗಿದ್ದ ಒಂದೇ ಕುಟುಂಬದ ಐವರು ಈಗ ಪ್ರಶ್ನೆ ಪತ್ರಿಕೆ ಸೋರಿಕೆ ಸೋರಿಕೆ ಪ್ರಕರಣದ ಆರೋಪಿಗಳಾಗಿದ್ದಾರೆ. ನೀಟ್ ಪರೀಕ್ಷೆ ತೇರ್ಗಡೆಯಾಗಿದ್ದ ಒಂದು ವರ್ಷದ ಬಳಿಕ ಹಗರಣದಲ್ಲಿ ದಿನೇಶ್ ಮತ್ತು ಆತನ ಸಹೋದರ ಮಂಗಿಲಾಲ್, ಸೋದರಳಿಯ ವಿಕಾಸ್ ಅವರನ್ನು ಬಂಧಿಸಲಾಗಿದೆ. ಬಿವಾಲ್ ಕುಟುಂಬದವರು ನಿಜಕ್ಕೂ ಪರೀಕ್ಷೆಯಲ್ಲಿ ಪಾಸ್ ಆಗಿದ್ದರೇ ಅಥವಾ ವೈದ್ಯಕೀಯ ಕಾಲೇಜುಗಳಲ್ಲಿ ಸೀಟುಗಳನ್ನು ಪಡೆಯಲು ನೀಟ್ ಪತ್ರಿಕೆ ಸೋರಿಕೆ ಜಾಲವನ್ನು ಬಳಸಿದ್ದರೇ ಎಂಬ ಬಗ್ಗೆ ತನಿಖೆ ನಡೆಸಲಾಗುತ್ತಿದೆ. ಪರೀಕ್ಷೆಯಲ್ಲಿ ಉತ್ತೀರ್ಣರಾದ ಎಲ್ಲರೂ 10 … Read more

3ನೇ ಹಂತದ ಎಸ್ ಐಆರ್ ಕರ್ನಾಟಕ ಸೇರಿ 16 ರಾಜ್ಯಗಳಲ್ಲಿ ಆರಂಭ: ಚುನಾವಣಾ ಆಯೋಗ ಘೋಷಣೆ

ನವದೆಹಲಿ: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್ ಐಆರ್) ಮೂರನೇ ಹಂತ ಆರಂಭಿಸುವುದಾಗಿ ಕೇಂದ್ರ ಚುನಾವಣಾ ಆಯೋಗ ಘೋಷಿಸಿದೆ. ಕೇಂದ್ರ ಚುನಾವಣಾ ಆಯೋಗದ ಮುಖ್ಯಸ್ಥ ಜ್ಞಾನೇಶ್ ಕುಮಾರ್ ಅವರು ಗುರುವಾರ ಕರ್ನಾಟಕ ಸೇರಿದಂತೆ 16 ರಾಜ್ಯಗಳು ಹಾಗೂ ಮೂರು ಕೇಂದ್ರಾಡಳಿತ ಪ್ರದೇಶಗಳಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ ಹಂತ-3 ಪ್ರಕ್ರಿಯೆಯನ್ನು ಆರಂಭಿಸಲಾಗುವುದು ಎಂದು ಘೋಷಿಸಿದರು. ಈ ಅಭಿಯಾನದಲ್ಲಿ ಮತದಾರರು ಉತ್ಸಾಹದಿಂದ ಭಾಗವಹಿಸಿ ತಮ್ಮ ಎಣಿಕೆ ಫಾರ್ಮ್ಗಳನ್ನು ಭರ್ತಿ ಮಾಡಬೇಕು ಎಂದು ಅವರು ಮನವಿ ಮಾಡಿದ್ದಾರೆ.

ಸತೀಶನ್ ಕೇರಳ ಸಿಎಂ

ತಿರುವನಂತಪುರಂ: ಕೇರಳ ರಾಜ್ಯದ ನೂತನ ಮುಖ್ಯಮಂತ್ರಿ ಆಯ್ಕೆ ವಿಚಾರವಾಗಿ ಕಳೆದೊಂದು ವಾರದಿಂದ ನಡೆದಿದ್ದ ರಾಜಕೀಯ ಪ್ರಹಸನಕ್ಕೆ ಕೊನೆಗೂ ತೆರೆ ಬಿದ್ದಿದ್ದು ಯುಡಿಎಫ್ ಮತ್ತು ಕಾಂಗ್ರೆಸ್ ಮೈತ್ರಿಕೂಟ ವಿ.ಡಿ. ಸತೀಶನ್ ಅವರನ್ನು ನೂತನ ಮುಖ್ಯಮಂತ್ರಿಯಾಗಿ ಆಯ್ಕೆ ಮಾಡಿದೆ. ಕೇರಳ ಮುಖ್ಯಮಂತ್ರಿ ಆಯ್ಕೆ ಕುರಿತ ಕಾಂಗ್ರೆಸ್‌ನ ಸಸ್ಪೆನ್ಸ್ಗೆ ಅಂತ್ಯವಾಗಿದ್ದು, ವಿ.ಡಿ.ಸತೀಶನ್ ಅವರೇ ನೂತನ ಮುಖ್ಯಮಂತ್ರಿ ಎಂದು ಘೋಷಣೆ ಮಾಡಲಾಗಿದೆ. 61 ವರ್ಷದ ಮಾಜಿ ವಿರೋಧ ಪಕ್ಷದ ನಾಯಕನಾಗಿದ್ದ ಅವರನ್ನು ಕಾಂಗ್ರೆಸ್ ತನ್ನ ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಆಯ್ಕೆ ಮಾಡಿದೆ. ಈ ಮುಖ್ಯಮಂತ್ರಿ … Read more

‘ಅಗ್ನಿಪರೀಕ್ಷೆ’ಯಲ್ಲಿ ವಿಜಯ್ ಗೆಲುವು ಎಐಎಡಿಎಂಕೆ ಬಂಡಾಯ ಬಣದ ಬೆಂಬಲ 144 ಶಾಸಕರ ವಿಶ್ವಾಸ ಮತ

ಚೆನ್ನೈ: ತಮಿಳುನಾಡು ಮುಖ್ಯಮಂತ್ರಿ ವಿಜಯ್ ವಿಶ್ವಾಸ ಮತ ಅಗ್ನಿಪರೀಕ್ಷೆಯಲ್ಲಿ ಭರ್ಜರಿ ಗೆಲುವು ಸಾಧಿಸಿದ್ದಾರೆ. ವಿಜಯ್ ಸರ್ಕಾರಕ್ಕೆ 144 ಶಾಸಕರ ಬೆಂಬಲ ದೊರೆತಿದೆ. ವಿಧಾನಸಭೆಯಲ್ಲಿ ಬುಧವಾರ ನಡೆದ ವಿಶ್ವಾಸಮತಯಾಚನೆ ವೇಳೆ ನಿರೀಕ್ಷೆಗೂ ಮೀರಿ 144 ಶಾಸಕರ ಬೆಂಬಲದೊAದಿಗೆ ತಮಿಳಗ ವೆಟ್ರಿ ಕಳಗಂ ಪಕ್ಷ ಬಹುಮತ ಸಾಬೀತುಪಡಿಸಿದೆ. ಮತ್ತೊಂದೆಡೆ ಟಿವಿಕೆ ಬೆಂಬಲಿಸುವ ಮೂಲಕ ಎಐಎಡಿಎಂಕೆ ಛಿದ್ರಗೊಂಡಿದೆ. ಟಿವಿಕೆ, ಕಾಂಗ್ರೆಸ್, ಸಿಪಿಎಂ, ಸಿಪಿಐ, ಮುಸ್ಲಿಮ್ ಲೀಗ್, ವಿಸಿಕೆ ಜೊತೆ ಎಐಎಡಿಎಂಕೆಯ ಬಂಡಾಯ ಎದ್ದಿರುವ 27 ಶಾಸಕರು ವಿಜಯ್ ಸರ್ಕಾರಕ್ಕೆ ಬೆಂಬಲ ನೀಡಿದ್ದಾರೆ. … Read more

ಶಾಲಾ-ಕಾಲೇಜುಗಳಲ್ಲಿ ಧಾರ್ಮಿಕ ವಸ್ತ್ರಕ್ಕೆ ಅವಕಾಶ

ಬೆಂಗಳೂರು: ಶಾಲಾ-ಕಾಲೇಜುಗಳಲ್ಲಿ ಜನಿವಾರ ಮತ್ತು ಹಿಜಾಬ್ ಸೇರಿದಂತೆ ಧಾರ್ಮಿಕ ಪದ್ಧತಿಗೆ ಅನುಗುಣವಾದ ವಸ್ತ್ರ ಧರಿಸಲು ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ಸಮವಸ್ತ್ರ ವಿಚಾರವಾಗಿ 2022ರ ಆದೇಶ ಹಿಂಪಡೆದು ಹೊಸ ಆದೇಶ ಹೊರಡಿಸಲಾಗಿದೆ. ಸರ್ಕಾರದ ನಿರ್ದೇಶನಗಳಿಗೆ ಅನುಗುಣವಾಗಿ ಆದೇಶ ಹೊರಡಿಸಲಾಗಿದೆ. ಸಮವಸ್ತ್ರ ನಿಗದಿಪಡಿಸಿ ಕಡ್ಡಾಯಗೊಳಿಸುವುದನ್ನು ಮುಂದುವರೆಸಬಹುದು ಎಂದು ಹೇಳಲಾಗಿದೆ. ಸಾಮಾನ್ಯವಾಗಿ ವಿದ್ಯಾರ್ಥಿಗಳು ಜನಿವಾರ, ಪವಿತ್ರ ದಾರ, ಶಿವದಾರ, ರುದ್ರಾಕ್ಷಿ, ಪೇಟ ಅಥವಾ ಟರ್ಬನ್, ತಲೆ ವಸ್ತ್ರ ಅಥವಾ ಹಿಜಾಬ್ ಇತರೆ ಯಾವುದೇ ಸ್ವರೂಪದ ಸಾಂಪ್ರದಾಯಿಕ ಸಂಕೇತವನ್ನು ನಿಗದಿಪಡಿಸಲಾದ … Read more

ಹೃದಯಾಘಾತದಿಂದ ನಟ, ನಿರ್ದೇಶಕ ದಿಲೀಪ್ ನಿಧನ

ಬೆಂಗಳೂರು: ಖ್ಯಾತ ನಟ, ನಿರ್ದೇಶಕ ಮತ್ತು ನಿರ್ಮಾಪಕ ದಿಲೀಪ್ ರಾಜ್ (47) ಬುಧವಾರ ಬೆಳಗಿನ ಜಾವ ಹೃದಯಾಘಾತದಿಂದ ನಿಧನರಾಗಿದ್ದಾರೆ. ಹಿಟ್ಲರ್ ಕಲ್ಯಾಣ ಸೀರಿಯಲ್ ಮೂಲಕ ದಿಲೀಪ್ ರಾಜ್ ಕಿರುತೆರೆಗೆ ಕಂಬ್ಯಾಕ್ ಮಾಡಿದ್ದರು. ಆ ಪಾತ್ರಕ್ಕೆ ವೀಕ್ಷಕರಿಂದ ಉತ್ತಮ ಪ್ರತಿಕ್ರಿಯೆ ಸಿಕ್ಕಿತ್ತು. ಸಿನಿಮಾ ಮತ್ತು ಟಿವಿ ಎರಡರಲ್ಲೂ ನಟ, ನಿರ್ಮಾಪಕ ದಿಲೀಪ್ ರಾಜ್ ಗುರುತಿಸಿಕೊಂಡಿದ್ದರು. 2005ರಲ್ಲಿ ಬಿಡುಗಡೆಯಾದ ಬಾಯ್‌ಫ್ರೆಂಡ್ ಸಿನಿಮಾದಲ್ಲಿ ನಾಯಕನಾಗಿ ನಟಿಸುವ ಮೂಲಕ ಸಿನಿಮಾಗೆ ಎಂಟ್ರಿ ಕೊಟ್ಟಿದ್ದರು. ಮಿಲನ ಸಿನಿಮಾದಲ್ಲಿ ವಿಲನ್ ಪಾತ್ರದ ಮೂಲಕ ಹೆಸರು ಪಡೆದಿದ್ದರು. … Read more

ಕಣ್ಣಿಗೆ ಕಾರದಪುಡಿ ಹಾಕಿ ದರೋಡೆ: ನಾಲ್ವರ ಬಂಧನ

ಚಿಕ್ಕಬಳ್ಳಾಪುರ: ವ್ಯಕ್ತಿಯೊಬ್ಬರ ಕಣ್ಣಿಗೆ ಮೆಣಸಿನ ಪುಡಿ ಎಸೆದು, ಮಚ್ಚಿನಿಂದ ಬೆದರಿಸಿ 7.5 ಲಕ್ಷ ದರೋಡೆ ಮಾಡಲಾಗಿದೆ. ನಾಲ್ವರು ವ್ಯಕ್ತಿಗಳನ್ನು ಬಂಧಿಸಲಾಗಿದೆ. ಅಪರಾಧ ನಡೆದ ಕೇವಲ ಮೂರು ಗಂಟೆಗಳಲ್ಲಿ ಪ್ರಕರಣ ಬೇಧಿಸಲಾಗಿದೆ. ಬಂಧಿತ ಆರೋಪಿಗಳನ್ನು ಯಶವಂತ್, ದರ್ಶನ್, ಭರತ್ ಮತ್ತು ವಿಶಕಾಂತಮೂರ್ತಿ ಎಂದು ಗುರುತಿಸಲಾಗಿದೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ. ದರೋಡೆ ಮಾಡಿದ್ದ 7.5 ಲಕ್ಷ, ಒಂದು ಕಾರು ಮತ್ತು ಅಪರಾಧಕ್ಕೆ ಬಳಸಲಾಗಿದೆ ಎನ್ನಲಾದ ಮೋಟಾರ್ ಬೈಕ್ ಮತ್ತು ಮಚ್ಚನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.