ಕೇರಳ ಸಿಎಂ ಆಯ್ಕೆ ನಂತರ ರಾಜ್ಯದತ್ತ ಗಮನ: ಜಾರಕಿಹೊಳಿ

ಬೆಂಗಳೂರು: ಕೇರಳದಲ್ಲಿ ಮುಖ್ಯಮಂತ್ರಿ ಆಯ್ಕೆ ಪ್ರಕ್ರಿಯೆ ಪೂರ್ಣಗೊಂಡ ನಂತರ ಕಾಂಗ್ರೆಸ್ ಹೈಕಮಾಂಡ್ ಶೀಘ್ರದಲ್ಲೇ ರಾಜ್ಯದತ್ತ ಗಮನ ಹರಿಸಲಿದೆ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದರು. ನಾಯಕತ್ವ ವಿಚಾರವಾಗಿ ಹೈಕಮಾಂಡ್ ಮೌನದ ವಿಚಾರವಾಗಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕ್ಯಾಬಿನೆಟ್ ಪುನಾರಚನೆ ಬಗ್ಗೆ ತೀರ್ಮಾನಿಸಲು ಈ ತಿಂಗಳ ಅಂತ್ಯದವರಗೆ ಸಮಯ ಇದೆ. ಮೊದಲು ಕೇರಳ ಸಿಎಂ ಇತ್ಯರ್ಥ ಆಗಬೇಕು. ಇನ್ನೂ ಸ್ವಲ್ಪ ದಿನ ಕಾಯಬೇಕು ಎಂದು ತಿಳಿಸಿದರು.

ಟಿವಿಕೆ ಶಾಸಕರಿಗೆ ‘ಸುಪ್ರೀಂ’ನಲ್ಲಿ ಗೆಲುವು

ಚೆನ್ನೈ: ತಮಿಳುನಾಡು ವಿಧಾನಸಭೆಯಲ್ಲಿ ಬಹುಮತ ಸಾಬೀತು ವೇಳೆ ಹಾಜರಾಗದಂತೆ ಟಿವಿಕೆ ಶಾಸಕ ಆರ್.ಶ್ರೀನಿವಾಸ ಸೇತುಪತಿ ಅವರನ್ನು ತಡೆದಿದ್ದ ಮದ್ರಾಸ್ ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಕೋರ್ಟ್ ಬುಧವಾರ ತಡೆ ನೀಡಿದೆ. ಈ ಸಂಬಂಧ ಸೇತುಪತಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ವಿಕ್ರಮ್ ನಾಥ್, ಸಂದೀಪ್ ಮೆಹ್ತಾ ಮತ್ತು ವಿಜಯ್ ಬಿಷ್ಣೋಯ್ ಅವರನ್ನೊಳಗೊಂಡ ನ್ಯಾಯಪೀಠ, ಕನಿಷ್ಠವಾಗಿ ಹೇಳುವುದಾದರೆ ಇದು ಅಮಾನವೀಯ ನಡೆಯಾಗಿದೆ. ಚುನಾವಣಾ ಅರ್ಜಿಯೇ ಪರಿಹಾರ ಎಂದು ಹೈಕೋರ್ಟ್ ಹೇಳುತ್ತದೆ. ಆದರೆ ಆರ್ಟಿಕಲ್ 226ರ ಅರ್ಜಿಯನ್ನು ಇನ್ನೂ ಪರಿಗಣಿಸುತ್ತಿದೆ … Read more

ಬಿಜೆಪಿ ಗೆಲುವಿಗೆ ತಿರುಚಿದ ಅಂಚೆ ಪತ್ರ ಕಾರಣ: ರಾಜೇಗೌಡ

ಬೆಂಗಳೂರು: ಶೃಂಗೇರಿ ವಿಧಾನಸಭೆ ಕ್ಷೇತ್ರದಲ್ಲಿ ಬಿಜೆಪಿ ಗೆಲುವಿಗೆ ನಕಲಿ ಹಾಗೂ ತಿರುಚಿದ ಅಂಚೆ ಪತ್ರಗಳು ಕಾರಣ ಎಂದು ಶಾಸಕ ಡಿ.ಟಿ.ರಾಜೇಗೌಡ ಆರೋಪಿಸಿದರು. ಶೃಂಗೇರಿ ಕ್ಷೇತ್ರದ ಅಂಚೆ ಮತ ಎಣಿಕೆಯ ಫಲಿತಾಂಶವನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿ ಚುನಾಯಿತ ಪ್ರತಿನಿಧಿಯಾಗಿ ಅವರನ್ನು ಮರುನೇಮಕಗೊಳಿಸಿದ ನಂತರ ಮಾತನಾಡಿದ ಅವರು, ಈ ಹೋರಾಟದಲ್ಲಿ ಬಿಜೆಪಿ ಸ್ಥಾನ ಕಳೆದುಕೊಳ್ಳುವ ಸಾಧ್ಯತೆ ಹೆಚ್ಚಿತ್ತು. ನಕಲಿ ದಾಖಲೆ, ಅಂಚೆ ಮತಪತ್ರಗಳನ್ನು ತಿರುಚಲಾಗಿತ್ತು ಎಂದು ದೂರಿದರು. ನ್ಯಾಯಾಲಯವು ಅನೇಕ ಸುಳ್ಳುಗಳನ್ನು ಹಾಗೂ ನನ್ನ ವಿರೋಧಿಗಳು ಹೇರಿದ ಸುಮಾರು 18 … Read more

ನಂದಿಗ್ರಾಮ ಕ್ಷೇತ್ರಕ್ಕೆ ಸುವೇಂದು ರಾಜೀನಾಮೆ

ಕೋಲ್ಕತ್ತಾ: ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ ಅವರು ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಭದ್ರಕೋಟೆ ಭಬಾನಿಪುರ ಕ್ಷೇತ್ರವನ್ನು ಉಳಿಸಿಕೊಳ್ಳುವುದಾಗಿ ಬುಧವಾರ ಘೋಷಿಸಿದ್ದಾರೆ. ನಂದಿಗ್ರಾಮಕ್ಕೆ ರಾಜೀನಾಮೆ ನೀಡಿದ್ದಾರೆ. ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಯಲ್ಲಿ ಸುವೇಂದು ಅಧಿಕಾರಿ ಅವರು ಭಬಾನಿಪುರದಲ್ಲಿ ಮಮತಾ ಬ್ಯಾನರ್ಜಿ ವಿರುದ್ಧ ಹಾಗೂ ತಮ್ಮ ಸ್ವಕ್ಷೇತ್ರ ನಂದಿಗ್ರಾಮದಲ್ಲಿ ಟಿಎಂಸಿ ಅಭ್ಯರ್ಥಿ ವಿರುದ್ಧ ಭರ್ಜರಿ ಗೆಲುವು ಸಾಧಿಸಿದ್ದರು. ಈಗ ಒಂದು ಕಡೆ ರಾಜೀನಾಮೆ ನೀಡಿದ್ದು, ಭವಾನಿಪುರವನ್ನು ಉಳಿಸಿಕೊಂಡಿದ್ದಾರೆ.

ತುಮಕೂರು ಮದರಸಾದಲ್ಲಿ ಮಕ್ಕಳ ಮೇಲೆ ದೌರ್ಜನ್ಯ ಆರೋಪ 24 ಮಕ್ಕಳ ರಕ್ಷಣೆ, ಮೌಲ್ವಿ ವಿರುದ್ಧ ಎಫ್‌ಐಆರ್

Tumakuru: ತುಮಕೂರಿನ ಅಮ್ಲಾಪುರದಲ್ಲಿರುವ ಜಾಮಿಯಾ ಅರೇಬಿಯಾ ಹಸೀನಿಯಾ ಟ್ರಸ್ಟ್‌ನ ಮದರಸಾದಲ್ಲಿ ಮಕ್ಕಳ ಮೇಲೆ ದೌರ್ಜನ್ಯ ನಡೆಸಲಾಗಿದೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಪ್ರಕರಣ ಸಂಬಂಧ ಮದರಸಾ ಮೌಲ್ವಿ ಮೌಲಾಲಿ ವಿರುದ್ಧ ತುಮಕೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ. ಮದರಸಾದಲ್ಲಿದ್ದ ಬಿಹಾರ ಮೂಲದ 24 ಮಕ್ಕಳು ಕಿರುಕುಳದಿಂದ ಬೇಸತ್ತು ಅಲ್ಲಿಂದ ಓಡಿ ಹೋಗಿದ್ದರೆಂದು ತಿಳಿದುಬಂದಿದೆ. ಬಳಿಕ ಮಕ್ಕಳು Bengaluru ರೈಲ್ವೆ ನಿಲ್ದಾಣದಲ್ಲಿ ಪತ್ತೆಯಾಗಿದ್ದು, ರೈಲ್ವೆ ರಕ್ಷಣಾ ದಳ (RPF) ಅವರು ಮಕ್ಕಳನ್ನು ರಕ್ಷಣೆ … Read more

ಅಕ್ರಮ: ನೀಟ್ ಪರೀಕ್ಷೆ ರದ್ದು ಸಿಬಿಐ ತನಿಖೆಗೆ ಆದೇಶ ಲಕ್ಷಾಂತರ ಆಕಾಂಕ್ಷಿಗಳಿಗೆ ನಿರಾಸೆ

ನವದೆಹಲಿ: ವೈದ್ಯಕೀಯ ಶಿಕ್ಷಣ ಪ್ರವೇಶಾತಿಗೆ ದೇಶಾದ್ಯಂತ ನಡೆಸಿದ್ದ ನೀಟ್ ಯುಜಿ ಪರೀಕ್ಷೆಯನ್ನು ಅಕ್ರಮದ ಹಿನ್ನೆಲೆಯಲ್ಲಿ ರಾಷ್ಟ್ರೀಯ ಪರೀಕ್ಷಾ ಏಜೆನ್ಸಿ (ಎನ್ ಟಿಎ) ರದ್ದುಗೊಳಿಸಿ ಆದೇಶಿಸಿದೆ. ಅಕ್ರಮದ ಬಗ್ಗೆ ಸಿಬಿಐ ತನಿಖೆಗೆ ವಹಿಸಲಾಗಿದೆ. ವೈದ್ಯಕೀಯ ಶಿಕ್ಷಣ ಪ್ರವೇಶಕ್ಕೆ ಪರೀಕ್ಷೆ ಬರೆದಿದ್ದ ಲಕ್ಷಾಂತರ ಆಕಾಂಕ್ಷಿಗಳಿಗೆ ಇದರಿಂದ ನಿರಾಸೆ ಆಗಿದೆ. ಅಲ್ಲದೆ, ವಿದ್ಯಾರ್ಥಿಗಳು ಮತ್ತೆ ಪರೀಕ್ಷೆ ಬರೆಯಬೇಕಾದ ಆತಂಕದಲ್ಲಿದ್ದಾರೆ. ನೀಟ್ ಪರೀಕ್ಷೆಯಲ್ಲಿ ಅಕ್ರಮ ನಡೆದಿದೆ ಎಂಬ ಗಂಭೀರ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಪರೀಕ್ಷೆಯನ್ನು ರದ್ದು ಮಾಡಲಾಗಿದೆ. ಪರೀಕ್ಷಾ ಪಾರದರ್ಶಕತೆ ಮತ್ತು ವಿಶ್ವಾಸಾರ್ಹತೆ … Read more

ರಾಜೇಗೌಡಗೆ ಮತ್ತೆ ಪ್ರಮಾಣ: ಸ್ಪೀಕರ್

ಮೈಸೂರು: ಶೃಂಗೇರಿ ವಿಧಾನಸಭಾ ಕ್ಷೇತ್ರದ ಶಾಸಕರ ಆಯ್ಕೆ ವಿಚಾರದಲ್ಲಿ ಸುಪ್ರೀಂ ಕೋರ್ಟ್ ಆದೇಶ ಪಾಲಿಸಲಾಗುವುದು ಎಂದು ವಿಧಾನಸಭೆ ಸ್ಪೀಕರ್ ಯು.ಟಿ.ಖಾದರ್ ತಿಳಿಸಿದರು. ನಗರದಲ್ಲಿ ಮಂಗಳವಾರ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಶೃಂಗೇರಿ ಕ್ಷೇತ್ರದ ಮರು ಮತ ಎಣಿಕೆ ಫಲಿತಾಂಶಕ್ಕೆ ನ್ಯಾಯಾಲಯ ತಡೆ ನೀಡಿರುವ ಕಾರಣ ರಾಜೇಗೌಡರೇ ಶಾಸಕರಾಗಿ ಮುಂದುವರಿಯುತ್ತಾರೆ. ಮತ್ತೆ ಪ್ರಮಾಣವಚನ ಸ್ವೀಕಾರಕ್ಕೆ ಅವರು ಸಮಯ ಕೇಳಿದ್ದಾರೆ. ಸದ್ಯದಲ್ಲೇ ಅವಕಾಶ ನೀಡುತ್ತೇನೆ ಎಂದು ಹೇಳಿದರು.

717 ಮದ್ಯದಂಗಡಿ ಬಂದ್ ತಮಿಳುನಾಡು ಮುಖ್ಯಮಂತ್ರಿ ವಿಜಯ್ ದಿಟ್ಟ ನಿರ್ಧಾರ

ಚೆನ್ನೈ: ತಮಿಳುನಾಡು ಮುಖ್ಯಮಂತ್ರಿ ಜೋಸೆಫ್ ವಿಜಯ್ ರಾಜ್ಯದಲ್ಲಿ ಮದ್ಯಪಾನ ನಿಯಂತ್ರಣಕ್ಕೆ ದೊಡ್ಡ ಹೆಜ್ಜೆ ಇಟ್ಟಿದ್ದಾರೆ. ದೇವಾಲಯ, ಶಾಲೆಗಳು ಮತ್ತು ಬಸ್ ನಿಲ್ದಾಣಗಳ 500 ಮೀಟರ್ ವ್ಯಾಪ್ತಿಯೊಳಗೆ ಇರುವ 717 ಸರ್ಕಾರಿ ಮದ್ಯದಂಗಡಿಗಳನ್ನು ಎರಡು ವಾರದೊಳಗೆ ಮುಚ್ಚಲು ಆದೇಶಿಸಿದ್ದಾರೆ. ರಾಜ್ಯ ಸರ್ಕಾರದ ಅಧೀನದಲ್ಲಿ (ತಮಿಳುನಾಡು ಸ್ಟೇಟ್ ಮಾರ್ಕೆಟಿಂಗ್ ಕಾರ್ಪೋರೇಷನ್) ಈ ಮದ್ಯದಂಗಡಿಗಳು ಕಾರ್ಯನಿರ್ವಹಿಸುತ್ತಿವೆ. ರಾಜ್ಯದಲ್ಲಿ ಒಟ್ಟು 4,765 ಟಿಎಎಸ್‌ಎಮ್‌ಎಸಿ ಅಂಗಡಿಗಳಿವೆ. ಅವುಗಳಲ್ಲಿ 276 ದೇವಾಲಯಗಳ ಸಮೀಪ, 186 ಶಿಕ್ಷಣ ಸಂಸ್ಥೆಗಳ ಬಳಿ ಹಾಗೂ 255 ಬಸ್ ನಿಲ್ದಾಣಗಳ ಬಳಿ … Read more

ಬೌರಿಂಗ್ ಆಸ್ಪತ್ರೆ ದುರಂತ: ಸರ್ಕಾರಕ್ಕೆ ಡಿಸಿ ವರದಿ ಸಲ್ಲಿಕೆ

ಬೆಂಗಳೂರು: ಬೌರಿಂಗ್ ಆಸ್ಪತ್ರೆ ಗೋಡೆ ಕುಸಿದು ಏಳು ಜನರು ಸಾವನ್ನಪ್ಪಿದ್ದ ಪ್ರಕರಣಕ್ಕೆ ಸಂಬAಧಿಸಿದAತೆ ಜಿಲ್ಲಾಧಿಕಾರಿ ಜಗದೀಶ್ ಸರ್ಕಾರಕ್ಕೆ ತನಿಖಾ ವರದಿ ಸಲ್ಲಿಕೆ ಮಾಡಿದ್ದಾರೆ. ಇದರಲ್ಲಿ ಏಳು ಜನರ ಸಾವಿಗೆ ಆರೋಗ್ಯ ಇಲಾಖೆ ಇಂಜಿನಿಯರ್ ಮತ್ತು ಗುತ್ತಿಗೆದಾರರ ನಿರ್ಲಕ್ಷ್ಯವೇ ಕಾರಣ ಹಾಗೂ ಆಸ್ಪತ್ರೆ ಆಡಳಿತ ಮಂಡಳಿಯ ನಿರ್ಲಕ್ಷ್ಯ ಬಯಲಾಗಿದೆ. ಬೆಂಗಳೂರು ಡಿಸಿ ಜಗದೀಶ್ ಮಾತನಾಡಿ, ಸರ್ಕಾರ ತನಿಖೆಗೆ ಸೂಚಿಸಿತ್ತು. ಕೂಲಂಕುಷವಾಗಿ ತನಿಖೆಯನ್ನ ಮಾಡಿ, ವರದಿ ಸಲ್ಲಿಕೆ ಮಾಡಿದ್ದೇನೆ. ಏನು ಸಲ್ಲಿಕೆ ಆಗಿದೆ ಅಂತಾ ಡಿಸ್ಕ್ಲೋಸ್ ಮಾಡಲ್ಲ. ಮುಚ್ಚಿದ ಲಕೋಟೆಯಲ್ಲಿ … Read more

ರಾಜ್ಯದಲ್ಲಿ ಜಲಕಂಟಕ: ಕೋಡಿ ಶ್ರೀ ಭವಿಷ್ಯ

ಶಿವಮೊಗ್ಗ: ರಾಜ್ಯದಲ್ಲಿ ಆಕಾಲಿಕ ಮಳೆಯಿಂದ ಜಲಕಂಟಕ ಎದುರಾಗಲಿದೆ ಎಂದು ಕೋಡಿಮಠದ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಸ್ಫೋಟಕ ಭವಿಷ್ಯ ನುಡಿದಿದ್ದಾರೆ. ಜಡೆ ಸಂಸ್ಥಾನ ಮಠದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು. ದೇಶದಲ್ಲಿ ಸಕಾಲಿಕವಾಗಿ ಮಳೆಯಾಗದೆ ಹೋದರೂ ಅಕಾಲಿಕವಾಗಿ ಸುರಿಯುವ ಮಳೆಯಿಂದಾಗಿ ಜಲಕಂಟಕ ಎದುರಾಗಲಿದೆ. ಮಳೆ, ಗುಡುಗು ಮತ್ತು ಸಿಡಿಲಿನ ಆರ್ಭಟ ಹೆಚ್ಚಾಗಲಿದೆ. ಮಳೆಗಾಲದ ನಿಗದಿತ ಅವಧಿಯಲ್ಲಿ ಮಳೆಯಾಗದೆ ಅನಿರೀಕ್ಷಿತ ಸಮಯದಲ್ಲಿ ಸುರಿಯುವ ಮಳೆಯು ಗಂಭೀರ ಪರಿಣಾಮ ಬೀರಲಿದೆ ಎಂದರು. ರಾಜ್ಯ ಮತ್ತು ದೇಶದ ರಾಜಕಾರಣದ ಬಗ್ಗೆ ಕೇಳಲಾದ … Read more