ಇಬ್ಬರು ಮಕ್ಕಳ ಕೊಲೆ ಮಾಡಿ ತಂದೆ ಆತ್ಮಹತ್ಯೆ

ಕುಣಿಗಲ್: ಹೆಂಡತಿ ಬಿಟ್ಟು ಹೋಗಿದ್ದಕ್ಕೆ ಅರ್ಚಕನೊಬ್ಬ ತನ್ನ ಇಬ್ಬರು ಮಕ್ಕಳನ್ನು ಕತ್ತು ಹಿಸುಕಿ ಕೊಂದು ಬಳಿಕ ತಾನೂ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಕುಣಿಗಲ್ ತಾಲೂಕಿನ ಆಲ್ಕೆರೆ ಗ್ರಾಮದಲ್ಲಿ ಶುಕ್ರವಾರ ರಾತ್ರಿ ನಡೆದಿದೆ. ಆತ್ಮಹತ್ಯೆಗೆ ಶರಣಾದವರನ್ನು ಗ್ರಾಮದ ಮಲ್ಲೆಶ್ವರ ಸ್ವಾಮಿ ದೇವಸ್ಥಾನದ ಅರ್ಚಕ ಶಿವಣ್ಣ (40) ಎಂದು ಗುರುತಿಸಲಾಗಿದೆ. ಅವರು ಮಕ್ಕಳಾದ ಜೀವನ್ (10) ಹಾಗೂ ಪ್ರಾಣೇಶ್ (5) ಅವರನ್ನು ಕತ್ತುಹಿಸುಕಿ ಕೊಂದು ಬಳಿಕ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಶಿವಣ್ಣ ಅವರ ಪತ್ನಿ ಕಾವ್ಯಾ (35) ಬೇರೊಬ್ಬರ … Read more

ಬೈಕ್ ಸವಾರ ಸಾವು

ಬೆಂಗಳೂರು: ಕೆಲಸ ಮುಗಿಸಿ ಶುಕ್ರವಾರ ತಡರಾತ್ರಿ ಮನೆಗೆ ತೆರಳುವ ವೇಳೆ ಟಾಟಾ ಏಸ್ ವಾಹನ ಡಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲಿ ಸಾವನಪ್ಪಿರುವ ಘಟನೆ ಹೊರವಲಯದ ನೆಲಮಂಗಲ ಬಳಿಯ ಹುಸ್ಕೂರು ಎಪಿಎಂಸಿ ಬಳಿ ನಡೆದಿದೆ. ಬೈಕ್ ಸವಾರ ಗಿರೀಶ್ (30) ಸಾವನ್ನಪ್ಪಿದ್ದಾರೆ. ಬೆಂಗಳೂರು ಉತ್ತರ ತಾಲೂಕು ವಡೇರಹಳ್ಳಿ ಗ್ರಾಮದ ನಿವಾಸಿಯಾಗಿದ್ದ ಗಿರೀಶ್ ಡ್ರೈವರ್ ಕೆಲಸ ಮಾಡಿಕೊಂಡಿದ್ದರು. ಸಿಸಿಟಿವಿಯಲ್ಲಿ ಅಪಘಾತದ ದೃಶ್ಯ ಸೆರೆಯಾಗಿದೆ. ಅಪಘಾತದ ಬಳಿಕ ಟಾಟಾ ಏಸ್ ವಾಹನ ಚಾಲಕ ಸ್ಥಳದಿಂದ ಎಸ್ಕೇಪ್ ಆಗಿದ್ದಾನೆ.

ಬಿಸಿಲಿನ ತಾಪಕ್ಕೆ ಕೂಲಿ ಕಾರ್ಮಿಕ ಸಾವು

ಯಾದಗಿರಿ: ಬಿಸಿಲಿನ ತಾಪಕ್ಕೆ ಕೂಲಿ ಕಾರ್ಮಿಕ ಸಾವನ್ನಪ್ಪಿರುವ ಘಟನೆ ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಸತ್ಯಂಪೇಟೆ ಗ್ರಾಮದಲ್ಲಿ ನಡೆದಿದೆ. ಸಿದ್ದಪ್ಪ ಕೊಂಡಗುಳಿ ಮೃತ ಕಾರ್ಮಿಕ. ಕೂಲಿ ಕೆಲಸದಿಂದ ಮನೆ ಬಂದಾಗ ಏಕಾಏಕಿ ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ ಎನ್ನಲಾಗಿದೆ. ಮನೆಗೆ ಬಂದ ತಕ್ಷಣ ನೀರಿನ ದಾಹ ತಣಿಸಿಕೊಳ್ಳಲು ನೀರು ಕುಡಿದಿದ್ದರು. ಆದರೆ ಕೆಲವು ಕ್ಷಣಗಳಲ್ಲೇ ಕುಸಿದು ಬಿದ್ದು ಮೃತಪಟ್ಟಿದ್ದಾರೆ.

ಅಗ್ನಿ ಅವಘಡದಿಂದ ಪಾರು- ಹೃದಯಾಘಾತದಿಂದ ಸಾವು!

ತಿಪಟೂರು: ತೆಂಗಿನಕಾಯಿ ಮಟ್ಟೆ ತುಂಬಿದ್ದ ಲಾರಿಯೊಂದು ಆಕಸ್ಮಿಕವಾಗಿ ಬೆಂಕಿಗೆ ಆಹುತಿಯಾಗುತ್ತಿದ್ದ ವೇಳೆ ತನ್ನ ಜೀವ ಹಾಗೂ ವಾಹನ ರಕ್ಷಿಸಲು ಚಾಲಕ ಲಾರಿಯನ್ನು ಕೆರೆಗೆ ಇಳಿಸಿದರೂ ಬಳಿಕ ನೀರಿನಿಂದ ಹೊರಬಂದ ತಕ್ಷಣ ಹೃದಯಾಘಾತದಿಂದ ಮೃತಪಟ್ಟ ಹೃದಯ ವಿದ್ರಾವಕ ಘಟನೆ ತಿಪಟೂರು ತಾಲ್ಲೂಕಿನ ನೊಣವಿನಕೆರೆ ಹೋಬಳಿ ಗುಂಗರಮಳೆ ಕೆರೆಯಲ್ಲಿ ನಡೆದಿದೆ. ತಿಪಟೂರು ನಗರದ ಗಾಂಧೀನಗರ ನಿವಾಸಿ 46 ವರ್ಷದ ಚಾಂದ್ ಪಾಷ ಮೃತ ದುರ್ದೈವಿ ಚಾಲಕರಾಗಿದ್ದಾರೆ. ಚಾಂದ್ ಪಾಷ ಅವರು ಕ್ಯಾಂಟರ್ ಲಾರಿಯಲ್ಲಿ ತೆಂಗಿನಕಾಯಿ ಮಟ್ಟೆ ತುಂಬಿಕೊಂಡು ಸಾಗಿಸುತ್ತಿದ್ದ ವೇಳೆ … Read more

ರೈತರಿಗೆ ಕೇಬಲ್ ಕಳ್ಳರ ಕಾಟ- ಒಂದೇ ದಿನ ಕೇಬಲ್ ಕಟ್

ಕೊಡಿಗೇನಹಳ್ಳಿ: ಗಡಿಭಾಗದ ಮಳೆಯಾಶ್ರಿತರ ಪ್ರದೇಶದ ರೈತರು ತನ್ನ ಬೆಳೆ ಉಳಿಸಿಕೊಳ್ಳಲು ಪರದಾಡುತ್ತಿರುವಾಗ ಆರು ತಿಂಗಳಿಗೊಮ್ಮೆ ಬೋರ್‌ ವೆಲ್ ಕೇಬಲ್ ಕಳ್ಳರ ಹಾವಳಿಯಿಂದ ಬೆಳೆ ಉಳಿಸಿಕೊಳ್ಳಲು ಪರದಾಡಿತ್ತಿದ್ದು ಕೇಬಲ್ ಕಳ್ಳರು ರೈತರಿಗೆ ಸಿಂಹ ಸ್ವಪ್ನವಾಗಿ ಕಾಡುತ್ತಿದ್ದಾರೆ. ಮಧುಗಿರಿ ತಾಲೂಕಿನ ಕೊಡಿಗೇನಹಳ್ಳಿ ಹೋಬಳಿಯ ಅಣ್ಣೇನಹಳ್ಳಿ ಗ್ರಾಮದ ಹೊರ ಹೊಲಯದಲ್ಲಿ ಶುಕ್ರವಾರದ ರಾತ್ರಿ ಒಂದೆ ದಿನ ಅಣ್ಣೆನಹಳ್ಳಿಯ 20 ರೈತರ ಸರ್ವೆ ನಂ. 7/6, 7/2, 32, 8/5, 7/3, 6/1, 56, 163, 83, 22 ವ್ಯಾಪ್ತಿಯಲ್ಲಿ ಬೋರ್‌ ವೆಲ್‌ … Read more

ಎಸ್ಎಸ್ಎಲ್ ಸಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಪ್ಯಾರಾಮೆಡಿಕಲ್ ಸೇರುವ ಅವಕಾಶ

ಬೆಂಗಳೂರು: 2026-27ನೇ ಶೈಕ್ಷಣಿಕ ವರ್ಷದಲ್ಲಿ ಎಸ್ಎಸ್ಎಲ್ ಸಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಅರೆ ವೈದ್ಯಕೀಯ (ಪ್ಯಾರಾಮೆಡಿಕಲ್) ಸಂಸ್ಥೆಗಳಲ್ಲಿ ಕೆಲವು ಡಿಪ್ಲೊಮಾ ಕೋರ್ಸ್ ಗಳಿಗೆ ಪ್ರವೇಶ ಪಡೆಯಲು ಅವಕಾಶ ಕಲ್ಪಿಸಿ ಹೈಕೋರ್ಟ್ ಮಧ್ಯಂತರ ಆದೇಶ ನೀಡಿದೆ. ರಾಜ್ಯದಲ್ಲಿ ಸುಮಾರು 640 ಕಾಲೇಜುಗಳನ್ನು ಹೊಂದಿರುವ ಕರ್ನಾಟಕ ಅರೆ ವೈದ್ಯಕೀಯ ಸಂಸ್ಥೆಗಳ ನಿರ್ವಹಣಾ ಸಂಘ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಇ.ಎಸ್.ಇಂದಿರೇಶ್ ಅವರಿದ್ದ ನ್ಯಾಯಪೀಠ ಈ ಮಧ್ಯಂತರ ಆದೇಶ ನೀಡಿತು. 2026-27ರ ಶೈಕ್ಷಣಿಕ ವರ್ಷದಲ್ಲಿ ಎಸ್ಎಸ್ಎಲ್ ಸಿ ಉತ್ತೀರ್ಣರಾದ ವಿದ್ಯಾರ್ಥಿಗಳನ್ನು ಪ್ಯಾರಾಮೆಡಿಕಲ್ … Read more

ಬಸ್ ಪಲ್ಟಿ: 30ಕ್ಕೂ ಹೆಚ್ಚು ಮಂದಿಗೆ ಗಾಯ

ಚಾಮರಾಜನಗರ: ನಿಯಂತ್ರಣ ತಪ್ಪಿದ ಕೆಎಸ್ಆರ್​ಟಿಸಿ ಬಸ್ ಪಲ್ಟಿಯಾಗಿದ್ದು, 30ಕ್ಕೂ ಅಧಿಕ ಮಂದಿ ಪ್ರಯಾಣಿಕರು ಗಾಯಗೊಂಡ ಘಟನೆ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟ ರಸ್ತೆಯ ತಾಳುಬೆಟ್ಟದ ತಿರುವಿನಲ್ಲಿ ಇಂದು ನಡೆಯಿತು. ಮಲೆ ಮಹದೇಶ್ವರ ಬೆಟ್ಟದಿಂದ ಕೊಳ್ಳೇಗಾಲದತ್ತ ತೆರಳುತ್ತಿದ್ದ ಕೆಎ-09 ಎಫ್-5415 ಬಸ್ ತಾಳುಬೆಟ್ಟದ ತಿರುವಿನಲ್ಲಿ ತಡೆಗೋಡೆಯ ಬಳಿ ಪಲ್ಟಿಯಾಗಿದೆ. ಬಸ್​ನಲ್ಲಿದ್ದ 50 ಮಂದಿ ಪ್ರಯಾಣಿಕರಲ್ಲಿ 30ಕ್ಕೂ ಅಧಿಕ ಮಂದಿಗೆ ಗಾಯಗಳಾಗಿದ್ದು, ಬಹುತೇಕರಿಗೆ ಗಂಭೀರ ಸ್ವರೂಪದ ಪೆಟ್ಟುಗಳಾಗಿವೆ ಎಂದು ತಿಳಿದು ಬಂದಿದೆ. ಬಸ್​ ನಿರ್ವಾಹಕಿ ಪದ್ಮಾವತಿ ಅವರಿಗೆ ತಲೆಗೆ … Read more

ವಾಣಿಜ್ಯ ಸಿಲಿಂಡರ್ ಬೆಲೆ ಭಾರೀ ಏರಿಕೆ

ನವದೆಹಲಿ: ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ಬೆಲೆಯಲ್ಲಿ ಭಾರೀ ಏರಿಕೆಯಾಗಿದೆ. ಮೇ 1 ಜಾರಿಗೆ ಬರುವಂತೆ 993 ರೂಪಾಯಿ ಹೆಚ್ಚಳ ಮಾಡಲಾಗಿದೆ. ಕೇಂದ್ರ ಸರ್ಕಾರದ ನಿರ್ಧಾರಕ್ಕೆ ಹೋಟೆಲ್ ಉದ್ಯಮಿಗಳಿಂದ ಆಕ್ರೋಶ ವ್ಯಕ್ತವಾಗಿದೆ. ಭಾರಿ ಏರಿಕೆಯ ನಂತರ ದೆಹಲಿಯಲ್ಲಿ 19 ಕೆಜಿ ವಾಣಿಜ್ಯ ಸಿಲಿಂಡರ್ ಬೆಲೆ 3,071.50 ರೂಪಾಯಿ ತಲುಪಿದೆ. ಇದಕ್ಕೂ ಮೊದಲು ದೆಹಲಿಯಲ್ಲಿ ವಾಣಿಜ್ಯ ಸಿಲಿಂಡರ್ ಬೆಲೆ 2,078.50 ರೂಪಾಯಿ ಇತ್ತು. ಬೆಂಗಳೂರಿನಲ್ಲಿ 991 ರೂಪಾಯಿ ಏರಿಕೆಯಾಗಿದೆ. ಇಂದಿನಿAದ ಒಂದು ಕಮರ್ಷಿಯಲ್ ಸಿಲಿಂಡರ್ ಬೆಲೆ ಬರೋಬ್ಬರಿ 3,157 ರೂ. … Read more

ಕೆರೆಯಲ್ಲಿ ಮುಳುಗುತ್ತಿದ್ದ ಮಕ್ಕಳನ್ನು ರಕ್ಷಿಸಲು ಹೋಗಿ ತಾಯಿ ಸಾವು

ಚಿಕ್ಕಬಳ್ಳಾಪುರ: ನೀರಿನಲ್ಲಿ ಮುಳುಗುತ್ತಿದ್ದ ಮಕ್ಕಳನ್ನು ರಕ್ಷಿಸಲು ಹೋದ ತಾಯಿ ಸಾವನ್ನಪ್ಪಿರುವ ದಾರುಣ ಘಟನೆ ಚಿಂತಾಮಣಿ ತಾಲೂಕಿನ ಮುರಗಮಲ್ಲ ಕೆರೆಯಲ್ಲಿ ನಡೆದಿದೆ. ಬೆಂಗಳೂರಿನ ಬನಶಂಕರಿಯ ತಬುಸುಮ್ ಖಾನ್ (24) ಮೃತ ದುರ್ದೈವಿ. ಮುರುಗಮಲ್ಲಾದ ದರ್ಗಾಗೆ ಬಂದಿದ್ದ ಕುಟುಂಬಸ್ಥರು ಕೆರೆ ಬಳಿ ನೀರಿನಲ್ಲಿ ಆಟವಾಡುತ್ತಿದ್ದರು. ತಾಯಿ ಬಟ್ಟೆಯನ್ನು ತರಲು ಹೋದಾಗ ಮಕ್ಕಳು ಕೆರೆಗೆ ಹೋಗಿದ್ದು ಮುಳುಗಿದ್ದಾರೆ. ಇದನ್ನ ಕಂಡ ತಾಯಿ ಕೂಡಲೇ ಕೆರೆಗೆ ದುಮುಕಿದ್ದಾರೆ. ಈಜು ಬರದ ಕಾರಣ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ಅದೃಷ್ಟವಶಾತ್ ಅಲ್ಲೇ ಇದ್ದ ತಂದೆ ಹಾಗೂ … Read more