ಅಮರೇಶಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ
ಅಮರೇಶ ನುಗಡೋಣಿ ಅವರ ದಡ ಸೇರಿಸು ತಂದೆ ಕಥಾ ಸಂಕಲನಕ್ಕೆ 2025ನೇ ಸಾಲಿನ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ದೊರೆತಿದೆ. ಪ್ರತಿಷ್ಠಿತ ಪ್ರಶಸ್ತಿ 1 ಲಕ್ಷ ರೂ. ನಗದು ಬಹುಮಾನ, ಪ್ರಶಸ್ತಿಪತ್ರ ಮತ್ತು ಸ್ಮರಣಿಕೆಯನ್ನು ಒಳಗೊಂಡಿದೆ. ಡಾ.ಸಿದ್ದಲಿಂಗ ಪಟ್ಟಣಶೆಟ್ಟಿ, ಡಾ.ಜಯಲಲಿತ…
ಯುಗಾದಿ ಸಂಗೀತೋತ್ಸವ
ಮೈಸೂರು: ಮೈಸೂರು ಅರಮನೆ ಮಂಡಳಿ ವತಿಯಿಂದ ಯುಗಾದಿ ಹಬ್ಬದ ಅಂಗವಾಗಿ ಮಾರ್ಚ್ 19ರಂದು ಸಂಜೆ 5:30ಕ್ಕೆ ಅರಮನೆ ಆವರಣದಲ್ಲಿ ಯುಗಾದಿ ಸಂಗೀತೋತ್ಸವ ಕಾರ್ಯಕ್ರಮ ಆಯೋಜಿಸಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಕೇಂದ್ರ ಸಚಿವ ಎಚ್.ಡಿಕುಮಾರಸ್ವಾಮಿ, ಸಚಿವರಾದ ಎಚ್.ಸಿ.ಮಹದೇವಪ್ಪ ಭಾಗವಹಿಸುವರು ಶಾಸಕ ಟಿ.ಎಸ್.ಶ್ರೀವತ್ಸ ಅಧ್ಯಕ್ಷತೆ ವಹಿಸುವರು.
ಗ್ರಾಮೀಣ ಪ್ರದೇಶಕ್ಕೆ ಇನ್ಮುಂದೆ 45 ದಿನಕ್ಕೆ ಒಂದು ಸಿಲಿಂಡರ್
ನವದೆಹಲಿ: ದೇಶದ ಗ್ರಾಮೀಣ ಜನರಿಗೆ ಮತ್ತೆ ಅಡುಗೆಗೆ ಸೀಮೆಎಣ್ಣೆ ಬಳಸಲು ಕೇಂದ್ರ ಸರ್ಕಾರ ಅನುಮತಿ ನೀಡಿದೆ. ಅಲ್ಲದೆ, ಗ್ರಾಮೀಣ ಪ್ರದೇಶದ ಜನರಿಗೆ 45 ದಿನಕ್ಕೆ ಒಂದು ಸಿಲಿಂಡರ್ ನೀಡಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ರಾಜ್ಯಗಳಿಗೆ ಕೇಂದ್ರ ಸರ್ಕಾರ 1 ಲಕ್ಷ ಕಿಲೋಲೀಟರ್…
ಕಮರ್ಷಿಯಲ್ ಗ್ಯಾಸ್ ಇನ್ನೂ 10 ದಿನ ಸಮಸ್ಯೆ: ಮುನಿಯಪ್ಪ
ಬೆಂಗಳೂರು: ರಾಜ್ಯದಲ್ಲಿ ಹೋಟೆಲ್ಗಳಿಗೆ ಒಂದು ವಾರದಿಂದ 10 ದಿನಗಳ ಕಾಲ ಕಮರ್ಷಿಯಲ್ ಗ್ಯಾಸ್ ಸಮಸ್ಯೆ ಆಗಬಹುದು. ಅಲ್ಲಿವರೆಗೂ ಹೋಟೆಲ್ಗಳು ಸಹಿಸಿಕೊಳ್ಳಬೇಕು ಎಂದು ಆಹಾರ ಸಚಿವ ಮುನಿಯಪ್ಪ ತಿಳಿಸಿದರು. ವಿಧಾನ ಪರಿಷತ್ ನಲ್ಲಿ ಶುಕ್ರವಾರ ರಾಜ್ಯದಲ್ಲಿರುವ ಗ್ಯಾಸ್ ಸಮಸ್ಯೆ ಬಗ್ಗೆ ಕಾಂಗ್ರೆಸ್ ಸದಸ್ಯರಾದ…
ಮಕ್ಕಳ ಆತ್ಮಹತ್ಯೆ ತಡೆಗೆ ಕ್ರಮ
ಬೆಂಗಳೂರು: ರಾಜ್ಯದ ಸರ್ಕಾರಿ ಶಾಲೆ, ವಸತಿ ಶಾಲೆ ಹಾಗೂ ವಸತಿ ನಿಲಯಗಳಲ್ಲಿ 27 ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವಿಧಾನ ಪರಿಷತ್ನಲ್ಲಿ ಸಮಾಜ ಕಲ್ಯಾಣ ಇಲಾಖೆ ಸಚಿವ ಮಹದೇವಪ್ಪ ಮಾಹಿತಿ ನೀಡಿದರು. ಪ್ರಶ್ನೋತ್ತರ ಕಲಾಪದಲ್ಲಿ ಕಾಂಗ್ರೆಸ್ ಸದಸ್ಯ ತಿಪ್ಪಣ್ಣಪ್ಪ ಕಮಕನೂರು ಪ್ರಶ್ನೆ…
ಚಿರತೆ ದಾಳಿಗೆ ಕರು ಬಲಿ
ಗುಂಡ್ಲುಪೇಟೆ: ತಾಲೂಕಿನ ಕುಂದಕೆರೆ ಗ್ರಾಮದಲ್ಲಿ ಚಿರತೆ ದಾಳಿ ನಡೆಸಿ ಹಸುವಿನ ಕರುವನ್ನು ಬಲಿ ಪಡೆದಿದೆ. ಗ್ರಾಮದ ರವೀಶ್ ಎಂಬುವವರಿಗೆ ಸೇರಿದ ಕರು ಜಮೀನನಲ್ಲಿ ಮೇಯುತ್ತಿದ್ದ ವೇಳೆ ಚಿರತೆ ಹಠಾತ್ ದಾಳಿ ನಡೆಸಿದೆ. ಇದರಿಂದ ಸುತ್ತಲಿನ ಭೂಮಿ ಮಾಲೀಕರು ಭಯಭೀತರಾಗಿದ್ದಾರೆ. ಬಂಡೀಪುರ ಅಭಯಾರಣ್ಯ…
16ರಂದು ಸಿಎಂ ‘ಡಿನ್ನರ್ ಪಾರ್ಟಿ’
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾರ್ಚ್ 16ರಂದು ಕಾಂಗ್ರೆಸ್ ಸಚಿವರು ಮತ್ತು ಶಾಸಕರಿಗಾಗಿ ಡಿನ್ನರ್ ಪಾರ್ಟಿ ಆಯೋಜಿಸಿರುವುದು ರಾಜಕೀಯ ವಲಯದಲ್ಲಿ ಅಚ್ಚರಿಗೆ ಕಾರಣವಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಸರ್ಕಾರಿ ನಿವಾಸ ಕಾವೇರಿಯಲ್ಲಿ ಡಿನ್ನರ್ ಸಭೆ ಆಯೋಜಿಸಿರುವುದು ಕುತೂಹಲ ಮೂಡಿಸಿದೆ. ವಿಧಾನಸಭೆ ಅಧಿವೇಶನ…
ಉಸಿರಿರುವವರೆಗೂ ರಾಜಕೀಯ ಬಿಡಲ್ಲ ಸೋತಾಗಲೂ ಜನರ ಸೇವೆ ಬಿಟ್ಟಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ
ಮೈಸೂರು: ನನ್ನ ಕೊನೆ ಉಸಿರು ಇರುವವರೆಗೂ ರಾಜಕೀಯದಲ್ಲಿ ಇರುತ್ತೇನೆ. ನಾನು ರಾಜಕೀಯದಲ್ಲಿ ಹಲವು ಸೋಲು-ಗೆಲವು ಕಂಡಿದ್ದೇನೆ. ಸೋತಾಗಲೂ ಜನರ ಸೇವೆ ಬಿಟ್ಟಿಲ್ಲ. ಜನರ ಸೇವೆ ಮಾಡುತ್ತಲೇ ಇರುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಮೈಸೂರಿನ ವರಕೂಡು ಗ್ರಾಮದಲ್ಲಿ ಬೀರಶ್ವೇರ ಸ್ವಾಮಿಗೆ ವಿಶೇಷ…
ಸಿದ್ದಗಂಗಾ ಮಠದಲ್ಲಿ ಸೌದೆ ಒಲೆಯಲ್ಲಿ 30 ಸಾವಿರ ಭಕ್ತರಿಗೆ ಅಡುಗೆ ತಯಾರಿ
ಶ್ರೀ ಮಠದಲ್ಲಿ ಸೌರಶಕ್ತಿ, ಸೌದೆ ಹೊಟ್ಟು, ಭತ್ತದ ಹೊಟ್ಟು, ಅಡಿಕೆ, ತೆಂಗಿನ ಚಿಪ್ಪು ಬಳಸಿ ಪ್ರಸಾದ ವ್ಯವಸ್ಥೆ ತುಮಕೂರು: ತುಮಕೂರಿನ ಸಿದ್ದಗಂಗಾ ಮಠದಲ್ಲಿ ಪ್ರತಿನಿತ್ಯ ಸುಮಾರು 30 ಸಾವಿರ ಜನರಿಗೆ ಸೌದೆ ಒಲೆಯಿಂದಲೇ ಆಹಾರ ತಯಾರಿಸಿ ಬಡಿಸಲಾಗುತ್ತಿದೆ. ಶ್ರೀ ಶಿವಕುಮಾರ…
ಗ್ಯಾಸ್ ಸಮಸ್ಯೆ: ಬಿಜೆಪಿ ಸಂಸದರು ಸಂಸತ್ತಿನಲ್ಲಿ ಮಾತಾಡಲಿ- ಡಿಕೆಶಿ
ಬೆಂಗಳೂರು: ರಾಜ್ಯದ ಬಿಜೆಪಿ ಸಂಸದರು ಅಡುಗೆ ಅನಿಲ ಕೊರತೆ ವಿಚಾರವಾಗಿ ಸಂಸತ್ತಿನಲ್ಲಿ ಮಾತನಾಡಬೇಕು. ರಾಜ್ಯಕ್ಕೆ ನ್ಯಾಯ ಒದಗಿಸಿಕೊಡಬೇಕು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಆಗ್ರಹಿಸಿದರು. ಬೆಂಗಳೂರಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಅಡುಗೆ ಅನಿಲ ಸಿಲಿಂಡರ್ ಕೊರತೆಯಿಂದ ಸಾರ್ವಜನಿಕರಿಗೆ ತೊಂದರೆ ಆಗುತ್ತಿದೆ. ಈ…


